ADVERTISEMENT

ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರಕ್ಕೆ ನಿರ್ಬಂಧ : ನಿಯಮ ಮೀರಿದರೆ ಜೈಲು ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 10 ಮೇ 2018, 13:08 IST
Last Updated 10 ಮೇ 2018, 13:08 IST
ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರಕ್ಕೆ ನಿರ್ಬಂಧ : ನಿಯಮ ಮೀರಿದರೆ ಜೈಲು ಶಿಕ್ಷೆ
ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಚಾರಕ್ಕೆ ನಿರ್ಬಂಧ : ನಿಯಮ ಮೀರಿದರೆ ಜೈಲು ಶಿಕ್ಷೆ

ಮಂಗಳೂರು: ಬಹಿರಂಗ ಪ್ರಚಾರ ಅಂತ್ಯಗೊಂಡ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ಚುನಾವಣೆಯ ಮೇಲೆ ಪ್ರಭಾವ ಬೀರುವಂತಹ ಸಂದೇಶಗಳನ್ನು ಪ್ರಸಾರ ಮಾಡುವುದನ್ನು ನಿಷೇಧಿಸಿದ್ದು, ನಿಯಮ ಮೀರಿ ವರ್ತಿಸುವವರ ವಿರುದ್ಧ ಪ್ರಕರಣ ದಾಖಲು ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಸ್‌.ಸಸಿಕಾಂತ್ ಸೆಂಥಿಲ್ ಎಚ್ಚರಿಕೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಗುರುವಾರ ಮಾಹಿತಿ ನೀಡಿದ ಅವರು, ‘ಗುರುವಾರ ಸಂಜೆ 6 ಗಂಟೆಯ ಬಳಿಕ ದೃಶ್ಯ ಮಾಧ್ಯಮಗಳಲ್ಲಿ ಚುನಾವಣೆಗೆ ಸಂಬಂಧಿಸಿದ ಜಾಹೀರಾತುಗಳನ್ನು ಪ್ರಸಾರ ಮಾಡುವಂತಿಲ್ಲ. ಮುದ್ರಣ ಮಾಧ್ಯಮಗಳು ಒಪ್ಪಿಗೆ ಪಡೆದು ಪ್ರಕಟಿಸಬೇಕು. ಕೇಂದ್ರ ಚುನಾವಣಾ ಆಯೋಗವು ಸಾಮಾಜಿಕ ಜಾಲತಾಣಗಳು ಮತ್ತು ಸಾಮಾಜಿಕ ಮಾಧ್ಯಮಗಳನ್ನು ವಿದ್ಯುನ್ಮಾನ ಮಾಧ್ಯಮಗಳೆಂದು ಪರಿಗಣಿಸಿದೆ. ಅವುಗಳಿಗೂ ನಿರ್ಬಂಧ ಅನ್ವಯವಾಗುತ್ತದೆ’ ಎಂದರು.

ಯಾವುದೇ ಅಭ್ಯರ್ಥಿ ಅಥವಾ ಪಕ್ಷದ ಗೌರವಕ್ಕೆ ಹಾನಿ ಮಾಡುವಂತಹ, ಅಪಪ್ರಚಾರದ ಸಂದೇಶಗಳನ್ನು ಹಾಕುವುದು, ಚುನಾವಣೆಯ ಮೇಲೆ ಪ್ರಭಾವ ಬೀರುವಂತಹ ಸಂದೇಶಗಳನ್ನು ಪ್ರಸಾರ ಮಾಡುವುದು ಅಪರಾಧ ಕೃತ್ಯವಾಗುತ್ತದೆ. ಇಂತಹವುಗಳನ್ನು ಪತ್ತೆ ಮಾಡಲು ವಿಶೇಷ ತಂಡಗಳನ್ನು ನಿಯೋಜಿಸಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇರಿಸಿದ್ದು, ಕಾನೂನಿಗೆ ವಿರುದ್ಧವಾಗಿ ವರ್ತಿಸುವವರ ವಿರುದ್ಧ ಮೊಕದ್ದಮೆ ದಾಖಲು ಮಾಡಲಾಗುವುದು. ಈ ರೀತಿಯ ಅಪರಾಧ ಸಾಬೀತಾದಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವುದಕ್ಕೆ ಅವಕಾಶವಿದೆ ಎಂದರು.

ಮತದಾನ ಪ್ರಕ್ರಿಯೆಗೆ ಅಡ್ಡಿಪಡಿಸುವಂತಹ ಸಂದೇಶಗಳನ್ನು ರವಾನೆ ಮಾಡುವುದು ಕೂಡ ಅಪರಾಧವಾಗುತ್ತದೆ. ಈ ವಿಚಾರದಲ್ಲೂ ನಿಗಾ ಇರಿಸಲಾಗಿದೆ. ಯಾವುದೇ ರೀತಿಯಲ್ಲಿ ಮತದಾನಕ್ಕೆ ಅಡಚಣೆ ಉಂಟು ಮಾಡುವಂತಹ ಸಂದೇಶ ಕಳುಹಿಸಿದರೂ ಅವರ ವಿರುದ್ಧ ಮೊಕದ್ದಮೆ ದಾಖಲು ಮಾಡಲಾಗುವುದು ಎಂದು ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.