
ಪ್ರಜಾವಾಣಿ ವಾರ್ತೆ
ಶಾಂತರಸ ಪ್ರಧಾನ ವೇದಿಕೆ (ರಾಯಚೂರು): ಕರ್ನಾಟಕದೊಳಗೆ ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಶೈಕ್ಷಣಿಕ ಮತ್ತು ಉದ್ಯೋಗ ಸಂಬಂಧಿ ಸೌಲಭ್ಯಗಳು ಹೊರನಾಡ ಕನ್ನಡಿಗರಿಗೂ ಸಿಗಬೇಕು ಎನ್ನುವುದೂ ಸೇರಿದಂತೆ ನಾಲ್ಕು ನಿರ್ಣಯ ಹಾಗೂ ಎರಡು ಶಿಫಾರಸುಗಳನ್ನು ಸಮ್ಮೇಳನದಲ್ಲಿ ಕೈಗೊಳ್ಳಲಾಯಿತು.
ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ಸಮಾನ ಶಿಕ್ಷಣಕ್ಕೆ ನೀಲನಕ್ಷೆ ಸಿದ್ಧಗೊಳಿಸಿ, ಶೀಘ್ರವಾಗಿ ಅನುಷ್ಠಾನ ಗೊಳಿಸಬೇಕು. ರಾಷ್ಟ್ರಕವಿ ಪುರಸ್ಕಾರ ಕೊಡುವ ಪದ್ಧತಿ ಮುಂದುವರೆಸಬೇಕು ಎಂದು ಒತ್ತಾಯಿಸಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.