ADVERTISEMENT

ಸಿಂಡಿಕೇಟ್‌ ಸದಸ್ಯ ಹಕೀಂಗೆ ಪಿಎಚ್‌.ಡಿ: ತನಿಖೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 30 ಜೂನ್ 2019, 10:28 IST
Last Updated 30 ಜೂನ್ 2019, 10:28 IST

ಹೊಸಪೇಟೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಿಂಡಿಕೇಟ್‌ ಸದಸ್ಯ ಅಬ್ದುಲ್‌ ಹಕೀಂ ಅವರಿಗೆ ನೀಡಲಾಗಿರುವ ಪಿಎಚ್‌.ಡಿ ಬಗ್ಗೆ ತನಿಖೆ ನಡೆಸುವಂತೆ ಉನ್ನತ ಶಿಕ್ಷಣ ಸಚಿವ ಆರ್‌.ವಿ.ದೇಶಪಾಂಡೆ ಆದೇಶಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.

ಯುಜಿಸಿ ನಿಯಮಗಳನ್ನು ಗಾಳಿಗೆ ತೂರಿ, ಅಬ್ದುಲ್ ಹಕೀಂ ಅವರಿಗೆ ಪಿಎಚ್‌.ಡಿ ಪದವಿ ಪ್ರದಾನ ಮಾಡಲಾಗಿದೆ ಎಂದು ಆರೋಪಿಸಿ ವಿಧಾನಪರಿಷತ್‌ ಸದಸ್ಯ ಪ್ರೊ. ಎಸ್‌.ವಿ.ಸಂಕನೂರ ಕಳೆದ ಜೂನ್‌ 18ರಂದು ದೇಶಪಾಂಡೆಯವರಿಗೆ ದೂರು ನೀಡಿದ್ದರು. ಇದನ್ನು ಆಧರಿಸಿ ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ತನಿಖೆ ನಡೆಸುವಂತೆ ಸಚಿವರು ಜುಲೈ 15ರಂದು ಸೂಚಿಸಿದ್ದಾರೆ. ಅಲ್ಲದೆ ತಪ್ಪು ಎಸಗಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆಯೂ ತಿಳಿಸಿದ್ದಾರೆ.

ಪ್ರಕರಣದ ತನಿಖೆ ನಡೆಸಿ, ವರದಿ ನೀಡುವಂತೆ ಇದೀಗ ಇಲಾಖೆ ಪ್ರಧಾನ ಕಾರ್ಯದರ್ಶಿ ಭರತ್‌ಲಾಲ್‌ ಮೀನಾ ವಿಶ್ವವಿದ್ಯಾಲಯದ ಕುಲಸಚಿವ ವಿಜಯ ಪೂಣಚ್ಚ ತಂಬಂಡ ಅವರಿಗೆ ಪತ್ರ ಬರೆದಿದ್ದಾರೆ. ಪ್ರಕರಣದ ಕುರಿತು ‘ಪ್ರಜಾವಾಣಿ’ ವಿಸ್ತೃತ ವರದಿಯನ್ನು ಪ್ರಕಟಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.