ADVERTISEMENT

ಸಿಇಟಿ ಅರ್ಜಿ: ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2012, 19:30 IST
Last Updated 9 ಏಪ್ರಿಲ್ 2012, 19:30 IST

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಭರ್ತಿ ಮಾಡಿದ ಅರ್ಜಿಗಳನ್ನು ಸಂಬಂಧಪಟ್ಟ ಕಾಲೇಜುಗಳಿಗೆ ಸಲ್ಲಿಸುವ ಕೊನೆಯ ದಿನಾಂಕವನ್ನು ಇದೇ 13ರವರೆಗೂ ವಿಸ್ತರಿಸಲಾಗಿದೆ.

ಈ ಮುಂಚೆ ಅರ್ಜಿ ಸಲ್ಲಿಸಲು ಏಪ್ರಿಲ್ 10 ಕೊನೆಯ ದಿನಾಂಕವಾಗಿತ್ತು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ದಿನಾಂಕವನ್ನು ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳಿಂದ ಬರುವ ಅರ್ಜಿಗಳನ್ನು ಕಾಲೇಜುಗಳ ಪ್ರಾಂಶುಪಾಲರು ಇದೇ 16ರ ಒಳಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.