ADVERTISEMENT

ಸಿಇಟಿ: ಇಂದಿನಿಂದ ದಾಖಲೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 24 ಜೂನ್ 2012, 19:30 IST
Last Updated 24 ಜೂನ್ 2012, 19:30 IST

ಬೆಂಗಳೂರು: ಎಂಜಿನಿಯರಿಂಗ್, ವೈದ್ಯಕೀಯ ಹಾಗೂ ದಂತವೈದ್ಯಕೀಯ ಕೋರ್ಸ್‌ಗಳಿಗೆ ಸರ್ಕಾರಿ ಕೋಟಾದ ಅಡಿ ಪ್ರವೇಶ ಬಯಸಿ, ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆದಿರುವ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ಕಾರ್ಯ ಸೋಮವಾರದಿಂದ ಆರಂಭವಾಗಲಿದೆ.
 
ದಾಖಲೆಗಳ ಪರಿಶೀಲನೆ ಕಾರ್ಯ ಜುಲೈ 10ರವರೆಗೂ ಮುಂದುವರಿಯಲಿದೆ. ಒಂದರಿಂದ ಎರಡು ಸಾವಿರದ ರ‌್ಯಾಂಕ್‌ವರೆಗಿನ ವಿದ್ಯಾರ್ಥಿಗಳ ದಾಖಲೆ ಪರಿಶೀಲನೆ ಸೋಮವಾರ ನಡೆಯಲಿದೆ.

ಹೊರನಾಡು, ಗಡಿನಾಡು ಹಾಗೂ ಜಮ್ಮು ಮತ್ತು ಕಾಶ್ಮೀರದ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಮಾತ್ರ ನಡೆಯಲಿದೆ. ಕರ್ನಾಟಕದ ವಿದ್ಯಾರ್ಥಿಗಳ ದಾಖಲಾತಿ ಪರಿಶೀಲನೆಗೆ ರಾಜ್ಯದ ವಿವಿಧೆಡೆ 13 ಕೇಂದ್ರಗಳನ್ನು ತೆರೆಯಲಾಗಿದೆ.

ಯಾವ ಜಿಲ್ಲೆಯ ವಿದ್ಯಾರ್ಥಿಗಳು ಯಾವ ಕೇಂದ್ರಕ್ಕೆ ತೆರಳಿ, ದಾಖಲೆಗಳನ್ನು ಪರಿಶೀಲನೆಗೆ ನೀಡಬೇಕು ಎಂಬ ವಿವರ http://kea.kar.nic.in/cet-2012/Schedule.pdf ನಲ್ಲಿ ಲಭ್ಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.