ADVERTISEMENT

ಸಿಇಟಿ: ನಾಳೆವರೆಗೂ ಅವಕಾಶ

​ಪ್ರಜಾವಾಣಿ ವಾರ್ತೆ
Published 14 ಜುಲೈ 2013, 19:59 IST
Last Updated 14 ಜುಲೈ 2013, 19:59 IST

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ಈಗಾಗಲೇ ಸೀಟು ಆಯ್ಕೆ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಶುಲ್ಕ ಪಾವತಿಸಲು ಹಾಗೂ ಸಂಬಂಧಪಟ್ಟ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಮಂಗಳವಾರದವರೆಗೂ (ಜುಲೈ 16) ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ಈ ಮುಂಚೆ ಜುಲೈ 15 ಕೊನೆಯ ದಿನವಾಗಿತ್ತು. ಆದರೆ, ಕೆಲವು ವಿದ್ಯಾರ್ಥಿಗಳಿಗೆ ಇನ್ನೂ ದಾಖಲಾತಿ ಪತ್ರ ಡೌನ್‌ಲೋಡ್ ಮಾಡಿಕೊಳ್ಳಲು, ಶುಲ್ಕ ಪಾವತಿಸಲು ಸಾಧ್ಯವಾಗದ ಕಾರಣ ಮಂಗಳವಾರದವರೆಗೂ ಕಾಲಾವಕಾಶ ನೀಡಲಾಗಿದೆ.

23,485 ವಿದ್ಯಾರ್ಥಿಗಳು ಇಂಡಿಯನ್ ಬ್ಯಾಂಕ್ ಮೂಲಕ ಶುಲ್ಕ ಪಾವತಿಸಿದ್ದಾರೆ. 9,460 ವಿದ್ಯಾರ್ಥಿಗಳು ನೆಟ್ ಬ್ಯಾಂಕಿಂಗ್, ಇ - ಪೋರ್ಟಲ್, ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಮೂಲಕ ಹಾಗೂ 15,548 ವಿದ್ಯಾರ್ಥಿಗಳು ಆರ್‌ಟಿಜಿಎಸ್/  ನೆಫ್ಟ್ ಮೂಲಕ ಹಣ ಪಾವತಿಸಿದ್ದಾರೆ.

ಫಲಿತಾಂಶ: ಎಂಜಿನಿಯರಿಂಗ್ 3ನೇ ಸೆಮಿಸ್ಟ್‌ರ್ ಪ್ರವೇಶಕ್ಕೆ ಡಿಪ್ಲೊಮಾ ಅಭ್ಯರ್ಥಿಗಳಿಗೆ ಕಳೆದ ತಿಂಗಳ 30ರಂದ ನಡೆದ ಸಿಇಟಿ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಸಂಜೆ 5ಕ್ಕೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.