ADVERTISEMENT

ಸಿಇಸಿ ವರದಿ ಬಗ್ಗೆ ಮಾಹಿತಿ ಇಲ್ಲ: ಭಾರದ್ವಾಜ್

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2012, 19:30 IST
Last Updated 20 ಏಪ್ರಿಲ್ 2012, 19:30 IST

ಬೆಂಗಳೂರು: `ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಣಿಕಪ್ಪ ಹಗರಣ ಕುರಿತಂತೆ ಸಿಇಸಿ ಸಲ್ಲಿಸಿದ ವರದಿಯ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ. ಪ್ರಕರಣ ಸುಪ್ರೀಂ ಕೋರ್ಟ್‌ನ ಹಸಿರುಪೀಠದ ಮುಂದೆ ಇದ್ದು, ಪ್ರಕರಣದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ~ ಎಂದು ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, `ಬರ ನಿರ್ವಹಣೆ ಗಂಭೀರ ವಿಚಾರ. ರಾಜ್ಯ ಸರ್ಕಾರ ಉತ್ತಮವಾಗಿ ಕೆಲಸ ಮಾಡುತ್ತಿದೆ. ಹೆಚ್ಚಿನ ನೆರವು ಬೇಕಾದಾಗ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಸಲ್ಲಿಸಬೇಕು. ಇಂತಹ ಪರಿಸ್ಥಿತಿಯಲ್ಲಿ ಕೇಂದ್ರ ನೆರವಾಗುತ್ತದೆ~ ಎಂದು ಅವರು ತಿಳಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.