ಔರಾದ್: ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರ ಬದಲಾವಣೆ ವಿಷಯ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ ಹೇಳಿದರು.
ಬುಧವಾರ ಸಂಜೆ ಇಲ್ಲಿ ಬಸವಜಯಂತಿ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಪ್ರಶ್ನೆಗೆ ಈ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ನಾಳೆ (ಗುರುವಾರ) ಬೆಂಗಳೂರಿಗೆ ಧರ್ಮೇಂದ್ರ ಪ್ರಧಾನ್ ಬರಲಿದ್ದು, ಮುಖ್ಯಮಂತ್ರಿ ಬದಲಾವಣೆ ವಿಷಯದಲ್ಲಿ ಚರ್ಚೆ ನಡೆಯಲಿದೆ ಎಂದು ಹೇಳಿದರು. ಈ ಬಗ್ಗೆ ಪಕ್ಷದ ರಾಜ್ಯ ಅಧ್ಯಕ್ಷ ಈಶ್ವರಪ್ಪ ನೀಡಿದ ಹೇಳಿಕೆ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ತಿಳಿಸಿದರು.
ಸೋಮಣ್ಣ ಹೇಳಿಕೆ: ಸದಾನಂದಗೌಡ ಅವರನ್ನು ಬದಲಿಸಿದರೆ ಅವರ ಜೊತೆ 13 ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂಬ ಸಚಿವ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ವಸತಿ ಸಚಿವ ವಿ. ಸೋಮಣ್ಣ, ಜಾರಕಿಹೊಳಿ ಅಂಥವರು ಪಕ್ಷ ಒಡೆಯುವ ಕೆಲಸ ಮಾಡುತ್ತಾರೆ. ಅವರು ಸಚಿವರಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಸಿಎಂ ಸದಾನಂದಗೌಡ ಅವರು ಶಾಸಕಾಂಗ ಸಭೆ ಕರೆಯದೇ ಇರುವುದು ಅವರ ವಿರುದ್ಧ ಅಸಮಾಧಾನಕ್ಕೆ ಕಾರಣ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.