ADVERTISEMENT

ಸಿಐಡಿ ವರದಿ ರದ್ದತಿಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2011, 19:30 IST
Last Updated 21 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ (ಗ್ರೂಪ್ ಎ ಮತ್ತು ಬಿ) ನೇಮಕಾತಿಗೆ ಕರ್ನಾಟಕ ಲೋಕ ಸೇವಾ ಆಯೋಗವು 1998, 1999 ಹಾಗೂ 2004ರಲ್ಲಿ ನಡೆಸಿರುವ ಪರೀಕ್ಷೆಯಲ್ಲಿ ನಡೆದ ಅವ್ಯವಹಾರದಲ್ಲಿ ಭಾಗಿಯಾಗಿರುವ ಆರೋಪ ಹೊತ್ತ ಕೆಎಎಸ್ ಅಧಿಕಾರಿಗಳಾದ ಅರ್ಚನಾ, ಆಶಾ, ಸಲ್ಮಾ  ಅವರು ಸಿಐಡಿ ವರದಿ ರದ್ದತಿಗೆ ಕೋರಿ ಹೈಕೋರ್ಟ್‌ಗೆ ಬುಧವಾರ ಅರ್ಜಿ ಸಲ್ಲಿಸಿದ್ದಾರೆ.

ಇದೇ 19ರಂದು ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿರುವ ಇವರು ಈಗ ಸಿಐಡಿ ವರದಿ ಪ್ರಶ್ನಿಸಿದ್ದಾರೆ.  ವರದಿಯಲ್ಲಿ ಇರುವ ತಮ್ಮ ಹೆಸರನ್ನು ಕೈಬಿಡಲು ಸಿಐಡಿಗೆ ಆದೇಶಿಸಬೇಕು ಎನ್ನುವುದು ಅವರ ಮನವಿ. ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಆಯ್ಕೆಯಾದ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಸಿಐಡಿ ತನಿಖೆಗೆ ಆದೇಶಿಸಿತ್ತು.
 
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.