ADVERTISEMENT

ಸಿದ್ದರಾಮಯ್ಯ, ಆಂಜನೇಯ ಮೇಲೆ ಮಲ ಸುರಿಯಬೇಕು: ಡಾ. ಎನ್‌.ಮೂರ್ತಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2018, 19:30 IST
Last Updated 16 ಏಪ್ರಿಲ್ 2018, 19:30 IST

ಚಿತ್ರದುರ್ಗ: ‘ಹಕ್ಕುಗಳ ಈಡೇರಿಕೆಗಾಗಿ ದಲಿತರು, ಮಾದಿಗರು ತಮ್ಮ ಮೇಲೆ ಮಲ ಸುರಿದುಕೊಳ್ಳುವ ಬದಲು ಸಿದ್ದರಾಮಯ್ಯ, ಎಚ್.ಆಂಜನೇಯ ಅವರ ಮೇಲೆ ಮಲ ಸುರಿಯಬೇಕು. ಅಷ್ಟರ ಮಟ್ಟಿಗೆ ಹೊಟ್ಟೆ ಉರಿಯುತ್ತಿದೆ’ ಎಂದು ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಹೋರಾಟ ಸಮಿತಿ ಉಪಾಧ್ಯಕ್ಷ ಡಾ.ಎನ್.ಮೂರ್ತಿ ಆಕ್ರೋಶ ವ್ಯಕ್ತಪಡಿಸಿದರು.

ದಲಿತ, ಮಾದಿಗ ಸಮುದಾಯಕ್ಕೆ ಅತ್ಯಂತ ದ್ರೋಹ ಮಾಡಿದ ಸರ್ಕಾರ ಸಿದ್ದರಾಮಯ್ಯ ಸರ್ಕಾರ. ಸಮುದಾಯದ ಪತನಕ್ಕೆ ಆಂಜನೇಯ ಕಾರಣರಾಗಿದ್ದಾರೆ. ದಲಿತರ ಶ್ರೇಯೋಭಿವೃದ್ಧಿ ಮಾಡುವುದಾಗಿ ಹೇಳಿ ದ್ರೋಹ ಮಾಡಿದ್ದಾರೆ ಎಂದು ಸೋಮವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

‘ಮಾದಿಗ ಸಮುದಾಯದ ಆಂಜನೇಯ, ಕೆ.ಎಚ್.ಮುನಿಯಪ್ಪ ಹಲ್ಲು ಕಿತ್ತ ಹಾವುಗಳು. ಸಿದ್ದರಾಮಯ್ಯ ಅವರೊಂದಿಗೆ ಸೇರಿ ಮ್ಯಾಚ್ ಫಿಕ್ಸ್ ಮಾಡಿಕೊಂಡು, ದಾಸ್ಯದ ರಾಜಕಾರಣ ಮಾಡುತ್ತಿದ್ದಾರೆ. ಮಾದಿಗರ ಕಡು ವಿರೋಧಿಗಳಾಗಿದ್ದಾರೆ’ ಎಂದು ದೂರಿದರು.

ADVERTISEMENT

ವಿಶೇಷ ಘಟಕ ಯೋಜನೆ (ಎಸ್‌ಸಿಪಿ) ಮತ್ತು ಗಿರಿಜನ ಉಪ ಯೋಜನೆ (ಟಿಎಸ್‌ಪಿ) ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ₹ 87 ಸಾವಿರ ಕೋಟಿ ಬಿಡುಗಡೆ ಮಾಡಿರುವುದಾಗಿ ಹೇಳಿದ್ದಾರೆ. ಆದರೆ, ಅದರಲ್ಲಿನ ಶೇ 60ರಷ್ಟನ್ನು ಬೇರೆ ಯೋಜನೆಗಳಿಗೆ ಬಳಕೆ ಮಾಡಲಾಗಿದೆ. ಶೇ 20ರಷ್ಟೂ ಎಸ್‌ಸಿಪಿ, ಟಿಎಸ್‌ಪಿ ಯೋಜನೆಗಳಿಗೆ ಹಣ ಬಳಕೆಯಾಗಿಲ್ಲ. ಈ ಕುರಿತು ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.