ADVERTISEMENT

ಸಿದ್ದರಾಮಯ್ಯ ನಾಮಪತ್ರ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2013, 19:59 IST
Last Updated 15 ಏಪ್ರಿಲ್ 2013, 19:59 IST
ಸಿದ್ದರಾಮಯ್ಯ ನಾಮಪತ್ರ
ಸಿದ್ದರಾಮಯ್ಯ ನಾಮಪತ್ರ   

ಮೈಸೂರು: ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಅವರು ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಂಜನಗೂಡಿನಲ್ಲಿ  ಸೋಮವಾರ ನಾಮಪತ್ರ ಸಲ್ಲಿಸಿದರು.

ಸ್ವಗ್ರಾಮವಾದ ಸಿದ್ದರಾಮನಹುಂಡಿಗೆ ಬೆಳಿಗ್ಗೆ ತೆರಳಿದ ಅವರು ಕುಲದೇವರು ಸಿದ್ದರಾಮೇಶ್ವರನಿಗೆ ಪೂಜೆ ಸಲ್ಲಿಸಿದರು. ಪುತ್ರ ರಾಕೇಶ್ ಸಿದ್ದರಾಮಯ್ಯ  ಸೇರಿದಂತೆ ಕುಟುಂಬದ ಸದಸ್ಯರು ಹಾಜರಿದ್ದರು. ಚಾಮುಂಡಿಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನ ಹಾಗೂ ಉತ್ತನಹಳ್ಳಿಯ ಜ್ವಾಲಾಮುಖಿ  ತ್ರಿಪುರಸುಂದರಿ ಅಮ್ಮನವರ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಆ ಬಳಿಕ ಅಪಾರ ಬೆಂಬಲಿಗರೊಂದಿಗೆ ನಂಜನಗೂಡಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಯಾರು ಎಷ್ಟೇ ಹಣದ ಹೊಳೆ ಹರಿಸಿದರೂ ನನ್ನ ಗೆಲುವು ಖಚಿತ. ಜನ ಬಲದ ಮುಂದೆ ಹಣ ಬಲ ನಡೆಯುವುದಿಲ್ಲ. ಜನರ ಸಹಕಾರ ಚೆನ್ನಾಗಿದ್ದು, ಭಾರಿ ಅಂತರದ ಗೆಲ್ಲುತ್ತೇನೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚಿತ್ರನಟ ಅಂಬರೀಷ್ ಅಸಮಾಧಾನದ ಬಗ್ಗೆ ಪ್ರತಿಕ್ರಿಯಿಸಿದ ಅವರು, `ಹೈಕಮಾಂಡ್ ಈ ಕುರಿತು ತೀರ್ಮಾನ ತೆಗೆದುಕೊಳ್ಳಲಿದೆ.

ಪಕ್ಷದಲ್ಲಿ ಸಣ್ಣ, ಪುಟ್ಟ ಭಿನ್ನಾಭಿಪ್ರಾಯ ಇದ್ದರೂ ಅದನ್ನು ಸರಿ ಪಡಿಸಿಕೊಳ್ಳುತ್ತೇವೆ. ವರುಣಾ ಕ್ಷೇತ್ರದ ಅಭ್ಯರ್ಥಿಯಾಗಿ ಪ್ರಚಾರದಲ್ಲಿ ಹೆಚ್ಚು ಭಾಗವಹಿಸಲು ಆಗುತ್ತಿಲ್ಲ. ಇಡೀ ರಾಜ್ಯದಲ್ಲಿ ಚುನಾವಣೆ ಪ್ರವಾಸ ಮಾಡಬೇಕಿದೆ. ಹಾಗಾಗಿ ಪಕ್ಷದ ಮುಖಂಡರು, ಕಾಯಕರ್ತರು ಬೇಸರ ಪಟ್ಟುಕೊಳ್ಳದೆ ನನ್ನ ಪರ ಮತಯಾಚನೆ ಮಾಡಬೇಕು' ಎಂದು ಮನವಿ ಮಾಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.