ADVERTISEMENT

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೊಂದು ಬಾಣ

​ಪ್ರಜಾವಾಣಿ ವಾರ್ತೆ
Published 6 ಮೇ 2018, 14:24 IST
Last Updated 6 ಮೇ 2018, 14:24 IST
ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪತ್ರ ದಾಖಲೆ ಪ್ರದರ್ಶಿಸಿದರು
ಬೆಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ವಕ್ತಾರ ಸಂಬಿತ್ ಪತ್ರ ದಾಖಲೆ ಪ್ರದರ್ಶಿಸಿದರು   

ಬೆಂಗಳೂರು: ‘ಚೆನ್ನೈ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿ ಎಂದು ಘೋಷಿಸಿರುವ ವ್ಯಕ್ತಿಯನ್ನು ಸಿದ್ದರಾಮಯ್ಯ ಚೀನಾದಲ್ಲಿ ಭೇಟಿಯಾಗಿದ್ದರು’ ಎಂದು ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಮತ್ತೊಂದು ಆರೋಪ ಮಾಡಿದೆ.

ನಗರದಲ್ಲಿ ಭಾನುವಾರ ಪತ್ರಿಕಾಗೋಷ್ಠಿ ನಡೆಸಿ ದಾಖಲೆಗಳನ್ನು ಪ್ರದರ್ಶಿಸಿದ ಬಿಜೆಪಿ ವಕ್ತಾರ ಸಂಬಿತ್ ಪಾತ್ರ, ‘ಚೀನಾದಲ್ಲಿ 2013ರಲ್ಲಿ ನಡೆದ ಡಬ್ಲ್ಯೂಇಎಫ್‌ (ವಿಶ್ವ ಆರ್ಥಿಕ ಸಮಾವೇಶ) ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಈ ಸಂದರ್ಭ ಅವರು ವಿಜಯ್‌ ಈಶ್ವರ್‌ ಎಂಬ ತಲೆಮರೆಸಿಕೊಂಡಿರುವ ಆರೋಪಿಯನ್ನು ಭೇಟಿಯಾಗಿದ್ದರು’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT