ADVERTISEMENT

ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಅಮಿತ್ ಶಾ

​ಪ್ರಜಾವಾಣಿ ವಾರ್ತೆ
Published 12 ಏಪ್ರಿಲ್ 2018, 6:43 IST
Last Updated 12 ಏಪ್ರಿಲ್ 2018, 6:43 IST
ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಅಮಿತ್ ಶಾ
ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದ ಅಮಿತ್ ಶಾ   

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಹಿನ್ನೆಲೆ ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ನಗರದ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿದರು.

ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಮಹಿಳೆಯರು ಪೂರ್ಣಕುಂಭದೊಂದಿಗೆ ಸ್ವಾಗತಿಸಿದರು.

ಶಾ ಅವರು ಗದ್ದಿಗೆಗೆ ತೆರಳಿ ಸಿದ್ಧಾರೂಢರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ತದನಂತರ ಸಿದ್ಧಾರೂಢರ ಮೂರ್ತಿಯನ್ನು ಸ್ಮರಣಿಕೆಯಾಗಿ ನೀಡಿ ಸನ್ಮಾನಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.