ADVERTISEMENT

ಸಿರಿಧಾನ್ಯ ಪಾಕ ವಿಧಾನ ಸ್ಪರ್ಧೆ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2011, 18:50 IST
Last Updated 14 ಮಾರ್ಚ್ 2011, 18:50 IST

ಬೆಂಗಳೂರು: ಧಾರವಾಡದ ಕೃಷಿ ಮಾಧ್ಯಮ ಕೇಂದ್ರ ಸಿರಿಧಾನ್ಯ ಬಳಕೆಯ ಪಾಕವಿಧಾನಗಳಿಗೆ ಬಹುಮಾನ ನೀಡಲು ಉದ್ದೇಶಿಸಿದೆ. ಸಾವಿ, ರಾಗಿ, ನವಣೆ, ಸಜ್ಜೆ, ಅರ್ಕಾ, ಊದಲು, ಕೊರ್ಲು, ಬರಗ ಮುಂತಾದ ಸಿರಿಧಾನ್ಯಗಳಿಂದ ತಯಾರಿಸುವ ಸಾಂಪ್ರದಾಯಿಕ ಮತ್ತು ಹೊಸ ಅಡುಗೆಗಳನ್ನು ದಾಖಲಿಸುವ ಮತ್ತು ಅವನ್ನು ಪ್ರಚುರಪಡಿಸುವ ಉದ್ದೇಶದೊಂದಿಗೆ ಭಾರತೀಯ ಸಿರಿ ಧಾನ್ಯಗಳ ಜಾಲ (ಮಿಲೆಟ್ ನೆಟ್‌ವರ್ಕ್ ಆಫ್ ಇಂಡಿಯಾ, ‘ಮಿನಿ’)ದ ಸಹಯೋಗದೊಂದಿಗೆ ಈ ಬಹುಮಾನ ಯೋಜನೆ ಹಮ್ಮಿಕೊಳ್ಳಲಾಗಿದೆ.

ಆಸಕ್ತರು ಸಿರಿಧಾನ್ಯಗಳಿಂದ ತಯಾರಿಸುವ ಅಥವಾ ಅವುಗಳ ಬಳಕೆಯನ್ನೊಳಗೊಂಡ ಯಾವುದೇ ಬಗೆಯ ಅಡುಗೆಯ ಬಗ್ಗೆ ವಿವರ ಕಳಿಸುವಂತೆ ಕೋರಿಕೆ.  ಅಡುಗೆ ಜೊತೆ ಅದು ರಾಜ್ಯದ ಯಾವ ಪ್ರದೇಶದಲ್ಲಿ ಬಳಸುತ್ತಾರೆಂಬುದನ್ನೂ ಸೂಚಿಸಬೇಕು.

ಪ್ರವೇಶಗಳನ್ನು ಕಳುಹಿಸಬೇಕಾದ ವಿಳಾಸ: ಕೃಷಿ ಮಾಧ್ಯಮ ಕೇಂದ್ರ, 119, 1ನೇ ಮುಖ್ಯರಸ್ತೆ, ನಾಲ್ಕನೇ ಅಡ್ಡರಸ್ತೆ, ನಾರಾಯಣಪುರ, ಧಾರವಾಡ - 580 008. ಪ್ರವೇಶ ತಲುಪಲು ಕೊನೆಯ ದಿನಾಂಕ: ಮಾರ್ಚ್ 20, 2011.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.