ADVERTISEMENT

ಸುಪ್ರೀಂ ಕೋರ್ಟ್ ತೀರ್ಪು ಟೀಕಿಸಿದ ರೈತನಿಗೆ ಜೈಲು

​ಪ್ರಜಾವಾಣಿ ವಾರ್ತೆ
Published 26 ಮೇ 2018, 19:30 IST
Last Updated 26 ಮೇ 2018, 19:30 IST

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಮತ್ತು ತೀರ್ಪು ನೀಡಿದ ನ್ಯಾಯಮೂರ್ತಿಗಳ ಬಗ್ಗೆ ಆಕ್ಷೇಪಾರ್ಹ ಟೀಕೆ ಮಾಡಿದ ಆರೋಪದಡಿ ಎಂ.ಡಿ.ರಾಜಣ್ಣ ಎಂಬ ರೈತನಿಗೆ ಹೈಕೋರ್ಟ್ ಆರು ತಿಂಗಳ ಜೈಲು ಶಿಕ್ಷೆ ಹಾಗೂ ₹ 2,000 ದಂಡ ವಿಧಿಸಿದೆ.

ಈ ಸಂಬಂಧ ಕಾಯ್ದಿರಿಸಿದ್ದ ಆದೇಶವನ್ನು ರಜಾಕಾಲದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿಗಳಾದ ಆರ್‌.ಬಿ‌.ಬೂದಿಹಾಳ್ ಹಾಗೂ ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಪ್ರಕಟಿಸಿದೆ. ರಾಜಣ್ಣ ವಿರುದ್ಧ ಮಂಡ್ಯದ ನಾಲ್ಕನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಬರೆದ ಪತ್ರ ಆಧರಿಸಿ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಸ್ವಯಂ ಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿಕೊಂಡಿದ್ದರು.

‘ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿದ್ದ ಟಿ.ಎಸ್‌. ಠಾಕೂರ್ ನೇತೃತ್ವದ ತ್ರಿಸದಸ್ಯ ಪೀಠದ ತೀರ್ಪನ್ನು ರಾಜಣ್ಣ ಉದ್ದೇಶಪೂರ್ವಕವಾಗಿ ಟೀಕೆ ಮಾಡಿದ್ದಾರೆ’ ಎಂದು ದೂರು ದಾಖಲಿಸಿಕೊಳ್ಳಲಾಗಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.