ಬೆಂಗಳೂರು: ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಿದೆ.
ಸುಬ್ರಹ್ಮಣ್ಯದಲ್ಲಿ 2 ಸೆಂ.ಮೀ, ಪುತ್ತೂರು ಹಾಗೂ ಹುಬ್ಬಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆ ದಾಖಲಾಗಿದೆ.
ಬಳ್ಳಾರಿಯಲ್ಲಿ 38.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಹವಾಮಾನ ಮುನ್ಸೂಚನೆ: ರಾಜ್ಯದ ಒಳನಾಡು ಹಾಗೂ ಕರಾವಳಿಯ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.