ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪೇಟ್ ಅಮ್ಮಾಪುರ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಎರಡು ಗುಂಪಿನ ಮಧ್ಯೆ ಗುರುವಾರ ಕಲ್ಲು ತೂರಾಟ ನಡೆದಿದ್ದು, ಘಟನೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೇರಿದಂತೆ ಕಾನ್ ಸ್ಟೆಬಲ್ ಗಳಿಬ್ಬರು ಗಾಯಗೊಂಡಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಲ್ಲು ತೂರಾಟದಲ್ಲಿ ಭಾಗವಹಿಸಿದ್ದ 20 ಮಂದಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆಗೊಳಪಡಿಸಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಡಾ ಮಾರ್ಟಿನ್ ಮಾರ್ಬ ನ್ಯಾಂಗ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.