ADVERTISEMENT

ಸುಳ್ಳು ಜಾತಿ ಪ್ರಮಾಣ ಪತ್ರ ಬಳಕೆ: ಅಮಾನತು, ಬಡ್ತಿ ತಡೆಗೆ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2012, 19:30 IST
Last Updated 24 ಫೆಬ್ರುವರಿ 2012, 19:30 IST

ಬೆಂಗಳೂರು: ಪರಿಶಿಷ್ಟ ಜಾತಿಯ ಹೆಸರಿನಲ್ಲಿ ಸುಳ್ಳು ಪ್ರಮಾಣ ಪತ್ರ ಪಡೆದು ಸರ್ಕಾರಿ ಉದ್ಯೋಗ ಪಡೆದಿರುವವರನ್ನು ತಕ್ಷಣವೇ ಅಮಾನತಿನಲ್ಲಿರಿಸಿ, ಬಡ್ತಿ, ಭತ್ಯೆ ಮತ್ತಿತರ ಸೌಲಭ್ಯಗಳನ್ನು ಕಡಿತಗೊಳಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಿಗೆ ಸೂಚನೆ ನೀಡಲಾಗುವುದು ಎಂದು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಸದಸ್ಯ ಎಂ.ಶಿವಣ್ಣ ತಿಳಿಸಿದರು.

ಕೇಂದ್ರ ಸರ್ಕಾರಿ ಸ್ವಾಮ್ಯದ ವಿಮಾ ಕಂಪೆನಿಗಳಾದ ನ್ಯೂ ಇಂಡಿಯೂ ಅಶ್ಯೂರೆನ್ಸ್, ನ್ಯಾಷನಲ್ ಇನ್ಶೂರೆನ್ಸ್ ಕಂಪೆನಿ, ಓರಿಯಂಟಲ್ ಇನ್ಶೂರೆನ್ಸ್ ಕಂಪೆನಿ ಮತ್ತು ಯುನೈಟೆಡ್ ಇಂಡಿಯಾ ಇನ್ಶೂರೆನ್ಸ್ ಕಂಪೆನಿಗಳಲ್ಲಿ ಪರಿಶಿಷ್ಟ ಜಾತಿ ನೌಕರರ ಸಮಸ್ಯೆಗಳು ಹಾಗೂ ಮೀಸಲಾತಿ ಸೌಲಭ್ಯದ ಬಳಕೆ ಕುರಿತು ಅವರು ಪರಿಶೀಲನೆ ನಡೆಸಿದರು.
 
ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು, ಸಂಸ್ಥೆಗಳು ಮತ್ತು ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರಗಳ ಬಳಕೆ ನಿಯಂತ್ರಣಕ್ಕೆ ಬಂದಿಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.