ಮೈಸೂರು: ಸುಳ್ವಾಡಿ ವಿಷಪೂರಿತ ಪ್ರಸಾದ ಪ್ರಕರಣದಲ್ಲಿ ಸಾವಿನ ಸಂಖ್ಯೆ 17ಕ್ಕೆ ಏರಿದೆ.
ಚಾಮರಾಜನಗರದ ಹನೂರು ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದ ರಂಗನ್ (45) ಶನಿವಾರ ಮೃತಪಟ್ಟಿದ್ದಾರೆ. ಇವರು 9 ದಿನಗಳಿಂದ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇವರನ್ನು ಮೊದಲು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಸುಯೋಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮೃತರ ಪತ್ನಿ ಹಾಗೂ ಮಗಳು ಸಹ ಮೈಸೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ 40 ಅಸ್ವಸ್ಥರಿಗೆ ಚಿಕಿತ್ಸೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.