ADVERTISEMENT

ಸೆ.9ರಿಂದ ಚೀನಾಕ್ಕೆ ಮುಖ್ಯಮಂತ್ರಿ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2013, 19:59 IST
Last Updated 3 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ಪಾಲ್ಗೊಳ್ಳಲು ಸೆ.9 ರಿಂದ 14ರವರೆಗೆ ಚೀನಾ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜಿಸಲು ಈಗಾಗಲೇ ಪ್ರಕ್ರಿಯೆಗಳು ಆರಂಭವಾಗಿವೆ. ಚೀನಾ ಪ್ರವಾಸದ ಸಂದರ್ಭದಲ್ಲಿ ಹೂಡಿಕೆದಾರರನ್ನು ಭೇಟಿಯಾಗಿ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗುವುದು ಎಂದು ತಿಳಿಸಿದರು.

2004ರಲ್ಲಿ ಕೆಪಿಎಸ್‌ಸಿ ಮೂಲಕ ನೇಮಕಾತಿಯಾದ 349 ಅಧಿಕಾರಿಗಳ ನೇಮಕಾತಿ ಅಕ್ರಮ ಎಂದು ಸಿಐಡಿ ವರದಿ ತಿಳಿಸಿದ್ದರೂ ಸರ್ಕಾರ ಬಡ್ತಿ ನೀಡಿದೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, `ಅಡ್ವೋಕೇಟ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಸರ್ಕಾರದ ನಿಲುವು ತಿಳಿಸಲಾಗುವುದು. ನ್ಯಾಯಾಲಯದ ಸೂಚನೆಯಂತೆ ಮುಂದಿನ ಕ್ರಮಕೈಗೊಳ್ಳುತ್ತೇವೆ' ಎಂದು ತಿಳಿಸಿದರು. ವಿಶ್ವ ಆರ್ಥಿಕ ವೇದಿಕೆ ಸಮಾವೇಶದಲ್ಲಿ ಪಾಲ್ಗೊಳ್ಳಲು ಸೆ.9 ರಿಂದ 14ರವರೆಗೆ ಚೀನಾ ಪ್ರವಾಸ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಆಯೋಜಿಸಲು ಈಗಾಗಲೇ ಪ್ರಕ್ರಿಯೆಗಳು ಆರಂಭವಾಗಿವೆ. ಚೀನಾ ಪ್ರವಾಸದ ಸಂದರ್ಭದಲ್ಲಿ ಹೂಡಿಕೆದಾರರನ್ನು ಭೇಟಿಯಾಗಿ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲಾಗುವುದು ಎಂದು ತಿಳಿಸಿದರು.

2004ರಲ್ಲಿ ಕೆಪಿಎಸ್‌ಸಿ ಮೂಲಕ ನೇಮಕಾತಿಯಾದ 349 ಅಧಿಕಾರಿಗಳ ನೇಮಕಾತಿ ಅಕ್ರಮ ಎಂದು ಸಿಐಡಿ ವರದಿ ತಿಳಿಸಿದ್ದರೂ ಸರ್ಕಾರ ಬಡ್ತಿ ನೀಡಿದೆ ಎಂದು ಆರೋಪಿಸಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, `ಅಡ್ವೋಕೇಟ್ ಜನರಲ್ ಮೂಲಕ ನ್ಯಾಯಾಲಯಕ್ಕೆ ಸರ್ಕಾರದ ನಿಲುವು ತಿಳಿಸಲಾಗುವುದು. ನ್ಯಾಯಾಲಯದ ಸೂಚನೆಯಂತೆ ಮುಂದಿನ ಕ್ರಮಕೈಗೊಳ್ಳುತ್ತೇವೆ' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.