ADVERTISEMENT

ಸೈನೈಡ್ ಮೋಹನ್‌ಗೆ 5ನೇ ಪ್ರಕರಣದಲ್ಲೂ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2018, 19:30 IST
Last Updated 24 ಫೆಬ್ರುವರಿ 2018, 19:30 IST
ಸೈನೈಡ್ ಮೋಹನ್‌ಗೆ 5ನೇ ಪ್ರಕರಣದಲ್ಲೂ ಜೀವಾವಧಿ ಶಿಕ್ಷೆ
ಸೈನೈಡ್ ಮೋಹನ್‌ಗೆ 5ನೇ ಪ್ರಕರಣದಲ್ಲೂ ಜೀವಾವಧಿ ಶಿಕ್ಷೆ   

ಮಂಗಳೂರು: ಯುವತಿಯರ ಸರಣಿ ಹಂತಕ ಸೈನೈಡ್‌ ಮೋಹನ್‌ಕುಮಾರ್‌ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ವಿಚಾರಣೆ ನಡೆಸಿದ ಇಲ್ಲಿಯ ಆರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ, 5ನೇ ಪ್ರಕರಣದಲ್ಲೂ ಜೀವಾವಧಿ ಶಿಕ್ಷೆ ವಿಧಿಸಿದೆ.

ಶುಕ್ರವಾರ ಅಂತಿಮ ವಿಚಾರಣೆ ನಡೆಸಿದ್ದ ನ್ಯಾಯಾಧೀಶ ಡಿ.ಜೆ.ಪುಟ್ಟರಂಗ ಸ್ವಾಮಿ, ಶನಿವಾರ ಶಿಕ್ಷೆಯನ್ನು ಪ್ರಕಟಿಸಿದರು.

ಬೆಳ್ತಂಗಡಿ ತಾಲ್ಲೂಕಿನ ಮೇಗಿನ ಮಾಲಾಡಿ ನಿವಾಸಿ ಯಶೋಧ (28) ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತೀರ್ಪು ನೀಡಲಾಗಿದೆ. ವಿಚಾರಣೆ ನಡೆದಿರುವ ಐದು ಪ್ರಕರಣಗಳ ಪೈಕಿ, ನಾಲ್ಕರಲ್ಲಿ ಜೀವಾವಧಿ ಹಾಗೂ ಸುನಂದಾ ಪ್ರಕರಣದಲ್ಲಿ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಇದನ್ನು ಹೈಕೋರ್ಟ್‌ ಕೂಡ ಎತ್ತಿ ಹಿಡಿದಿದೆ.

ADVERTISEMENT

2009 ರ ಅಕ್ಟೋಬರ್‌ 21 ರಂದು ನಡೆದಿದ್ದ ವನಿತಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 2009 ರ ಡಿಸೆಂಬರ್‌ 29ರಂದು ಸೈನೈಡ್‌ ಮೋಹನ್‌ಕುಮಾರ್‌ನನ್ನು ಬಂಧಿಸಲಾಗಿತ್ತು. ವಿಚಾರಣೆಯ ಸಂದರ್ಭದಲ್ಲಿ ಯಶೋಧ ಮೇಲೆಯೂ ಅತ್ಯಾಚಾರ ಎಸಗಿ, ಕೊಲೆ ಮಾಡಿರುವುದಾಗಿ ಮೋಹನ್‌ಕುಮಾರ್ ಒಪ್ಪಿಕೊಂಡಿದ್ದ. ಒಟ್ಟು 20 ಯುವತಿಯರ ಮೇಲೆ ಅತ್ಯಾಚಾರ ಎಸಗಿ, ಸೈನೈಡ್‌ ನೀಡಿ ಹತ್ಯೆ ಮಾಡಿರುವ ಆರೋಪ ಮೋಹನ್‌ಕುಮಾರ್‌ ಮೇಲಿದೆ. ಸರ್ಕಾರದ ಪರವಾಗಿ ಸರ್ಕಾರಿ ವಕೀಲ ಜುಡಿತ್‌ ಕ್ರಾಸ್ತಾ ವಾದಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.