ADVERTISEMENT

ಸೋಮಲಿಂಗಪ್ಪ ವಿರುದ್ಧ ಎಫ್‌ಐಆರ್

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2012, 19:30 IST
Last Updated 5 ಮಾರ್ಚ್ 2012, 19:30 IST

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ ಆರೋಪದ ಮೇಲೆ ಸಿರಗುಪ್ಪ ಶಾಸಕ ಎಂ.ಎಸ್.ಸೋಮಲಿಂಗಪ್ಪ ವಿರುದ್ಧ ಬೆಂಗಳೂರು ನಗರ ಲೋಕಾಯುಕ್ತ ಪೊಲೀಸರು ಸೋಮವಾರ `ಪ್ರಥಮ ಮಾಹಿತಿ ವರದಿ~  (ಎಫ್‌ಐಆರ್) ದಾಖಲಿಸಿದ್ದಾರೆ.

ಸೋಮಲಿಂಗಪ್ಪ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿದ್ದಾರೆ ಎಂದು ಆರೋಪಿಸಿ ನಿವೃತ್ತ ಉಪನ್ಯಾಸಕ ಬಿ.ಈರಣ್ಣ ಎಂಬುವರು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ (ಲೋಕಾಯುಕ್ತ) ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರು ಸಲ್ಲಿಸಿದ್ದರು. ದೂರನ್ನು ವಿಚಾರಣೆಗೆ ಸ್ವೀಕರಿಸಿದ್ದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್, ದೂರಿನಲ್ಲಿರುವ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿದ್ದರು.

`ಸೋಮವಾರ ಸಂಜೆ ನ್ಯಾಯಾಲಯದ ಆದೇಶದ ಪ್ರತಿ ನಮಗೆ ತಲುಪಿತು. ಆದೇಶವನ್ನು ಅಧ್ಯಯನ ನಡೆಸಿದ ಬಳಿಕ ಸೋಮಲಿಂಗಪ್ಪ ವಿರುದ್ಧ ಎಫ್‌ಐಆರ್ ದಾಖಲಿಸಲಾಯಿತು. ಎಂದು ಬೆಂಗಳೂರು ನಗರ ಲೋಕಾಯುಕ್ತ ಎಸ್‌ಪಿ ಪಿ.ಕೆ.ಶಿವಶಂಕರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.