ADVERTISEMENT

ಸ್ಪರ್ಧಾತ್ಮಕ ಪರೀಕ್ಷೆ: ಒಂದು ಲಕ್ಷ ಪ್ರೋತ್ಸಾಹ ಧನ

​ಪ್ರಜಾವಾಣಿ ವಾರ್ತೆ
Published 13 ಸೆಪ್ಟೆಂಬರ್ 2011, 19:30 IST
Last Updated 13 ಸೆಪ್ಟೆಂಬರ್ 2011, 19:30 IST

ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಖಿಲ ಭಾರತ ಸೇವೆಗಳು (ಐಎಎಸ್, ಐಪಿಎಸ್, ಐಎಫ್‌ಎಸ್ ಇತ್ಯಾದಿ) ಹಾಗೂ ಕೇಂದ್ರಾಡಳಿತ ಸೇವೆಗಳಿಗೆ ಆಯ್ಕೆಯಾಗುವ ಕರ್ನಾಟಕದ ಅಭ್ಯರ್ಥಿಗಳಿಗೆ 2011-12ನೇ ಸಾಲಿನಿಂದ ಜಾರಿಗೆ ಬರುವಂತೆ ತಲಾ ಒಂದು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲು ಸರ್ಕಾರ ಮಂಜೂರಾತಿ ನೀಡಿದೆ.

1ರಿಂದ 10ನೇ ತರಗತಿವರೆಗೆ ಸರ್ಕಾರಿ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡಿದವರಿಗೆ ಮಾತ್ರ ಈ ಸೌಲಭ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

ಎಂಜಿನಿಯರಿಂಗ್ ಕೋರ್ಸ್: ಇಂದು ಕೌನ್ಸೆಲಿಂಗ್

ಪ್ರಜಾವಾಣಿ ವಾರ್ತೆ
ಬೆಂಗಳೂರು:
ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಬುಧವಾರ 45001ರಿಂದ 51000 ರ‌್ಯಾಂಕ್‌ವರೆಗಿನ ವಿದ್ಯಾರ್ಥಿಗಳಿಗೆ ಕ್ಯಾಷುವಲ್ ಸುತ್ತಿನ ಕೌನ್ಸೆಲಿಂಗ್ ನಡೆಯಲಿದೆ. ವಿವಿಧ ವಿಷಯಗಳಲ್ಲಿ ಒಟ್ಟು 14,274 ಸೀಟುಗಳು ಪ್ರವೇಶಕ್ಕೆ ಲಭ್ಯವಾಗಲಿವೆ.

ಸಾಮಾನ್ಯ ವರ್ಗದ ಕೋಟಾದಡಿ 12,366 ಸೀಟುಗಳು ಹಂಚಿಕೆಗೆ ಲಭ್ಯವಿವೆ. ಇದೇ 16ಕ್ಕೆ ಕೌನ್ಸೆಲಿಂಗ್ ಪ್ರಕ್ರಿಯೆ ಮುಕ್ತಾಯವಾಗಲಿದ್ದು, ಈ ಬಾರಿಯೂ ಸಾವಿರಾರು ಸೀಟುಗಳು ಉಳಿಯುವ ಸಾಧ್ಯತೆಗಳಿವೆ.
 

ADVERTISEMENT

ಸ್ನಾತಕೋತ್ತರ ಪ್ರವೇಶ: 17ಕ್ಕೆ ತಪಾಸಣೆ

ಬೆಂಗಳೂರು:  ಅಂಗವಿಕಲ ಕೋಟಾದ ಅಡಿ ಎಂಬಿಎ, ಎಂಸಿಎ, ಎಂಇ, ಎಂಟೆಕ್ ಕೋರ್ಸ್‌ಗಳಿಗೆ ಪ್ರವೇಶ ಬಯಸಿರುವ ಅಭ್ಯರ್ಥಿಗಳಿಗೆ ಇದೇ 17ರಂದು ವೈದ್ಯಕೀಯ ತಪಾಸಣೆ ನಡೆಯಲಿದೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆವರಣದಲ್ಲಿ ಅಂದು ಬೆಳಿಗ್ಗೆ 11 ಕ್ಕೆ ತಪಾಸಣೆ ಆರಂಭವಾಗಲಿದ್ದು ವೈದ್ಯಕೀಯ ಸಮಿತಿ ನೀಡುವ ವರದಿಆಧರಿಸಿ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗುವುದು. ಎಂಇ, ಎಂಟೆಕ್ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹಅಭ್ಯರ್ಥಿಗಳಿಗೆ ಅದೇ ದಿನ ಮಧ್ಯಾಹ್ನ 3 ಗಂಟೆಗೆ ಸೀಟು ಆಯ್ಕೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.