
ಪ್ರಜಾವಾಣಿ ವಾರ್ತೆಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯಗಳನ್ನು ತೆಗೆದುಕೊಂಡಿರುವ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕಾಗಿ ಶನಿವಾರ ಸ್ಪಾಟ್ ರ‌್ಯಾಂಕಿಂಗ್ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.
ಎಲೆಕ್ಟ್ರಾನಿಕ್ಸ್ ಮತ್ತು ಕಂಪ್ಯೂಟರ್ ಸೈನ್ಸ್ ವಿಷಯಗಳನ್ನು ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳನ್ನೂ ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶಕ್ಕೆ ಪರಿಗಣಿಸಿ ಎಂದು ಹೈಕೋರ್ಟ್ ತೀರ್ಪು ನೀಡಿರುವುದರಿಂದ ಸ್ಪಾಟ್ ರ‌್ಯಾಂಕಿಂಗ್ ಪಟ್ಟಿ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ವಿ.ರಶ್ಮಿ `ಪ್ರಜಾವಾಣಿ~ಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.