ADVERTISEMENT

ಸ್ವಾತಂತ್ರ್ಯ ಹೋರಾಟಗಾರ ಕೆ.ವಿ. ಕಾಮತ್‌ ಇನ್ನಿಲ್ಲ

​ಪ್ರಜಾವಾಣಿ ವಾರ್ತೆ
Published 14 ಜನವರಿ 2016, 19:30 IST
Last Updated 14 ಜನವರಿ 2016, 19:30 IST
ಸ್ವಾತಂತ್ರ್ಯ ಹೋರಾಟಗಾರ ಕೆ.ವಿ. ಕಾಮತ್‌ ಇನ್ನಿಲ್ಲ
ಸ್ವಾತಂತ್ರ್ಯ ಹೋರಾಟಗಾರ ಕೆ.ವಿ. ಕಾಮತ್‌ ಇನ್ನಿಲ್ಲ   

ಮಂಗಳೂರು: ತೀರ್ಥಹಳ್ಳಿ ಮೂಲದ ಸ್ವಾತಂತ್ರ್ಯ ಹೋರಾಟಗಾರ ಕಟಪಾಡಿ ವಿಠೋಬ ಕಾಮತ್‌(92) ಅವರು ಅಲ್ಪ ಕಾಲದ ಅಸೌಖ್ಯದಿಂದ ಮಗಳ ಮನೆಯಲ್ಲಿ ಬುಧವಾರ ರಾತ್ರಿ ನಿಧನರಾದರು.

ಅವರಿಗೆ ಮೂವರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಬೆಂಗಳೂರಿನ ಸೆಂಟ್ರಲ್‌ ಕಾಲೇಜಿನಲ್ಲಿ ವಿಜ್ಞಾನ ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದ ವೇಳೆ ಗಾಂಧೀಜಿಯವರ ಸ್ವರಾಜ್ಯ ಚಳವಳಿಗೆ ಧುಮುಕಿದ್ದರು. ಅನೇಕ ಸ್ವಾತಂತ್ರ್ಯ ಹೋರಾಟಗಳಲ್ಲಿ ಭಾಗವಹಿಸಿದ್ದ ಅವರು ಜೈಲುಶಿಕ್ಷೆ ಅನುಭವಿಸಿದ್ದರು. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ನಂತರ  ಆಚಾರ್ಯ ವಿನೋಬಾ ಭಾವೆಯವರೊಂದಿಗೆ ಅನೇಕ ಚಳವಳಿಗಳಲ್ಲಿ ಭಾಗವಹಿಸಿದ್ದರು.

ಬಳಿಕ ತೀರ್ಥಹಳ್ಳಿಯಲ್ಲಿ ನೆಲೆಸಿ ನಾಲ್ಕು ದಶಕಗಳ ಕಾಲ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಸರ್ಕಾರದಿಂದ ಸಿಗುತ್ತಿದ್ದ ಮಾಸಾಶನವನ್ನು ಗೋಶಾಲೆಗಳಿಗೆ ಮತ್ತು ಸಮಾಜ ಕಾರ್ಯಗಳಿಗೆ ವಿನಿಯೋಗಿಸುತ್ತಿದ್ದರು. ಅಲ್ಲದೆ, ರಾಮಚಂದ್ರಾಪುರ ಮಠದ ಗೋಶಾಲೆಗೆ ಹತ್ತು ಎಕರೆ ಭೂಮಿಯನ್ನು ದಾನ ಮಾಡಿದ್ದರು. ಅನಾರೋಗ್ಯದಿಂದ ಕೆಲ ವರ್ಷಗಳಿಂದ ಬ್ರಹ್ಮಾವರದಲ್ಲಿ ನೆಲೆಸಿದ್ದ ಮಗನ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಬಂದಾಗ ಕೊನೆಯುಸಿರೆಳೆದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.