ADVERTISEMENT

ಹಂಚಲು ತಂದಿದ್ದ ಹತ್ತು ಕಟ್ಟು ಸೀರೆ ವಶ

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌: ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್‌ ದಾಳಿ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2018, 19:30 IST
Last Updated 19 ಏಪ್ರಿಲ್ 2018, 19:30 IST
ಹಂಚಲು ತಂದಿದ್ದ ಹತ್ತು ಕಟ್ಟು ಸೀರೆ ವಶ
ಹಂಚಲು ತಂದಿದ್ದ ಹತ್ತು ಕಟ್ಟು ಸೀರೆ ವಶ   

ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡ್‌ನಲ್ಲಿ ಮತದಾರರಿಗೆ ಆಮಿಷವೊಡ್ಡಿ ಸೀರೆ ಹಂಚಲಾಗುತ್ತಿದೆ ಎಂಬ ದೂರು ಬಂದಿದ್ದರಿಂದ ಚುನಾವಣಾ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಗುರುವಾರ ಮಧ್ಯಾಹ್ನ ನಗರ ಠಾಣೆ ಪೊಲೀಸರ ಜತೆಗೆ ಧಿಡೀರ್ ದಾಳಿ ನಡೆಸಿ, ಇಲ್ಲಿನ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಶಾಖೆಯಲ್ಲಿ ಸಂಗ್ರಹಿಸಿ ಇಡಲಾಗಿದ್ದ 1,222 ಸೀರೆಯ ಹತ್ತು ಕಟ್ಟುಗಳನ್ನು ವಶಪಡಿಸಿಕೊಂಡರು.

ಈ ಬ್ಯಾಂಕಿನಲ್ಲಿ ಸೀರೆ ಹಂಚತ್ತಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಸೂಕ್ತ ಕ್ರಮ ಕೈಗೊಳ್ಳಲು ಸ್ಥಳೀಯ ಅಧಿಕಾರಿಗಳು ಹಿಂದೇಟು ಹಾಕಿದ ಕಾರಣ ಬೆಂಗಳೂರು ಚುನಾವಣಾ ಆಯೋಗಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದರು ಎನ್ನಲಾಗಿದೆ.

ಈ ಹಿಂದೆಯೇ ಬ್ಯಾಂಕಿನಲ್ಲಿ ನವೋದಯ ಸ್ವಸಹಾಯ ಗುಂಪು ಸದಸ್ಯರಿಗೆ ಸಮವಸ್ತ್ರವಾಗಿ ವಿತರಿಸಲು ಸೀರೆ ತಂದಿಡಲಾಗಿದ್ದು, ಅದೇ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೊಂಡಿದ್ದರಿಂದ ಬ್ಯಾಂಕಿನಲ್ಲೇ ಇಡಲಾಗಿತ್ತು ಎಂದು ತಿಳಿದು ಬಂದಿದೆ.

ADVERTISEMENT

ಬಿ.ಸಿ.ರೋಡ್ ಶಾಖೆಯಲ್ಲಿ ಮಾತ್ರವಲ್ಲ, ಬೇರೆ ಕಡೆಯೂ ಈ ರೀತಿಯ ನಡೆಯುತ್ತಿದೆ. ಈ ಬಗ್ಗೆ ಮಾಹಿತಿ ಪಡೆದು ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ ಎಂದು ಪುರಸಭಾ ಸದಸ್ಯ ಎ. ಗೋವಿಂದ ಪ್ರಭು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.