ಕೋಲಾರ: ಎರಡು ಹೆಕ್ಟೇರ್ ಭೂಮಿಯಲ್ಲಿ ಹನಿ ನೀರಾವರಿ ಪದ್ಧತಿ ಅನುಸರಿಸಿ ಕೃಷಿ ನಡೆಸುವ ರೈತರಿಗೆ ಶೇ. 100ರಷ್ಟು ಸಬ್ಸಿಡಿ ನೀಡುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಭರವಸೆ ನೀಡಿದರು.
ಜಿಲ್ಲೆಯ ಬರಪೀಡಿತ ಗ್ರಾಮಗಳಿಗೆ ಶನಿವಾರ ಭೇಟಿ ನೀಡಿದ ಬಳಿಕ ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಪ್ರಸ್ತುತ ಹನಿ ನೀರಾವರಿಗೆ ಶೇ. 85 ಸಬ್ಸಿಡಿ ನೀಡಲಾಗುತ್ತಿದೆ. ಅಳಿದುಳಿದ ನೀರನ್ನು ಅವಲಂಬಿಸಿ ಹನಿ ನೀರಾವರಿ ಮೂಲಕ ಕೃಷಿ ನಡೆಸುತ್ತಿರುವವರಿಗೆ ಪೂರ್ಣ ಸಬ್ಸಿಡಿ ನೀಡಬೇಕು ಎಂದು ರೈತರು ಮನವಿ ಮಾಡಿದ್ದಾರೆ. ಅದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
8ಗಂಟೆ ಕಾಲ 3ಫೇಸ್ ವಿದ್ಯುತ್ ಪೂರೈಸಬೇಕು. ವಿದ್ಯುತ್ ಸಮಸ್ಯೆ ಏರ್ಪಟ್ಟಾಗ ಜನರೇಟರ್ ಅಳವಡಿಸಿ ಕೊಳವೆ ಬಾವಿಯಿಂದ ನೀರು ತೆಗೆದು ಜನರಿಗೆ ಕೊಡಬೇಕು ಎಂದೂ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.