ADVERTISEMENT

ಹನುಮಗಿರಿ ಆಂಜನೇಯನಿಂದ ಶಾಪ ಮುಕ್ತಿ?

​ಪ್ರಜಾವಾಣಿ ವಾರ್ತೆ
Published 7 ಡಿಸೆಂಬರ್ 2017, 19:30 IST
Last Updated 7 ಡಿಸೆಂಬರ್ 2017, 19:30 IST
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಹನುಮಗಿರಿ ಪಂಚಮುಖಿ ಆಂಜನೇಯ ಕ್ಷೇತ್ರಕ್ಕೆ ನವೆಂಬರ್‌ 2 ರಂದು ಭೇಟಿ ನೀಡಿದ್ದ ಯದುವೀರ್‌ ಕೃಷ್ಣ ದತ್ತ ಒಡೆಯರ್‌, ವಿಶೇಷ ಪೂಜೆ ಸಲ್ಲಿಸಿದ್ದರು. (ಸಂಗ್ರಹ ಚಿತ್ರ)
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಹನುಮಗಿರಿ ಪಂಚಮುಖಿ ಆಂಜನೇಯ ಕ್ಷೇತ್ರಕ್ಕೆ ನವೆಂಬರ್‌ 2 ರಂದು ಭೇಟಿ ನೀಡಿದ್ದ ಯದುವೀರ್‌ ಕೃಷ್ಣ ದತ್ತ ಒಡೆಯರ್‌, ವಿಶೇಷ ಪೂಜೆ ಸಲ್ಲಿಸಿದ್ದರು. (ಸಂಗ್ರಹ ಚಿತ್ರ)   

ಮಂಗಳೂರು: ಮೈಸೂರು ಮಹಾರಾಜ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್‌ ಅವರಿಗೆ ಪುತ್ರ ಸಂತಾನ ಪ್ರಾಪ್ತಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಈಶ್ವರ ಮಂಗಲದ ಹನುಮಗಿರಿ ಪಂಚಮುಖಿ ಆಂಜನೇಯನ ಕೃಪೆ ಇದೆ ಎನ್ನುವ ಮಾತುಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬರುತ್ತಿವೆ.

ಈ ಹಿಂದೆ ಮಹಾರಾಣಿ ಪ್ರಮೋದಾದೇವಿ ಹಾಗೂ ಪತ್ನಿ ತೃಷಿಕ ಅವರೊಂದಿಗೆ ಹನುಮಗಿರಿ ಕ್ಷೇತ್ರಕ್ಕೆ ಯದುವೀರ್‌ ಕೃಷ್ಣ ದತ್ತ ಒಡೆಯರ್‌ ಭೇಟಿ ನೀಡಿದ್ದರು. ನವೆಂಬರ್‌ 2 ರಂದು ಹನುಮಗಿರಿ ಕ್ಷೇತ್ರಕ್ಕೆ ಭೇಟಿ ನೀಡಿದ್ದ ಯದುವೀರ್‌ ಅವರು, ಪತ್ನಿ ತೃಷಿಕಳ ಆರೋಗ್ಯ, ಪುತ್ರ ಸಂತಾನದ ವಿಚಾರವಾಗಿ ಆಂಜನೇಯನಿಗೆ ವಿಶೇಷ ಪೂಜೆ ಸಲ್ಲಿಸಿದ್ದರು.

ಇದೀಗ ತೃಷಿಕ ಅವರಿಗೆ ಗಂಡು ಮಗು ಜನಿಸಿದ್ದು, ಒಡೆಯರ್‌ ಕುಟುಂಬಕ್ಕೆ ಇದ್ದ ಆಲಮೇಲಮ್ಮನ ಶಾಪಕ್ಕೆ ಹನುಮಗಿರಿ ಆಂಜನೇಯ ಮುಕ್ತಿ ನೀಡಿದ್ದಾನೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.