ADVERTISEMENT

ಹನೂರಿನಲ್ಲಿ ದಲಿತರಿಗೆ ಬಹಿಷ್ಕಾರ; ಸಿಗದ ಕೆಲಸ

​ಪ್ರಜಾವಾಣಿ ವಾರ್ತೆ
Published 1 ಜೂನ್ 2018, 19:30 IST
Last Updated 1 ಜೂನ್ 2018, 19:30 IST

ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮದಲ್ಲಿ ದಲಿತರಿಗೆ ಹೋಟೆಲ್, ಸಲೂನ್‌ಗಳ ಪ್ರವೇಶಕ್ಕೆ ಬಹಿಷ್ಕಾರ ಹಾಕಲಾಗಿದೆ.

‘ಸಾರ್ವಜನಿಕ ಸ್ಥಳಗಳ ಪ್ರವೇಶಕ್ಕೆ ಈ ಹಿಂದೆಯೂ ಬಹಿಷ್ಕಾರ ಹಾಕಿದ್ದರು. ಆಗ ಹಿರಿಯ ಅಧಿಕಾರಿಗಳು ಶಾಂತಿ ಸಭೆ ನಡೆಸಿದ್ದರು. ಇನ್ನು ಮುಂದೆ ಯಾವುದೇ ತಾರತಮ್ಯ ಮಾಡುವುದಿಲ್ಲ. ಬಹಿಷ್ಕಾರ ಹಾಕುವುದಿಲ್ಲ ಎಂದು ಮೇಲ್ವರ್ಗದವರು ತಿಳಿಸಿದ್ದರು. ಆದರೆ, ಈಗ ಅದನ್ನೇ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಯಾವುದೇ ಹೋಟೆಲ್, ಸಲೂನ್‌ಗಳಿಗೆ  ಪ್ರವೇಶ ನೀಡುತ್ತಿಲ್ಲ. ಇದನ್ನು ಪ್ರಶ್ನಿಸಿದರೆ ಬೆದರಿಕೆ ಹಾಕುತ್ತಾರೆ’ ಎಂದು ಗ್ರಾಮದ ದಲಿತರು ದೂರಿದರು.

‘ದಲಿತರು ಎನ್ನುವ ಕಾರಣಕ್ಕೆ ನಮಗೆ ಕೂಲಿ ಕೆಲಸ ಕೊಡುತ್ತಿಲ್ಲ. ಪಕ್ಕದ ಗ್ರಾಮಗಳಲ್ಲೂ ಕೆಲಸ ನೀಡದಂತೆ ಅಲ್ಲಿನ ಜಮೀನು ಮಾಲೀಕರಿಗೆ ಮೇಲ್ವರ್ಗದವರು ತಾಕೀತು ಮಾಡಿದ್ದಾರೆ. ಹೀಗಾಗಿ, ಕೆಲಸವಿಲ್ಲದೆ ತೊಂದರೆ ಅನುಭವಿಸುತ್ತಿದ್ದೇವೆ’ ಎಂದು ಅಳಲು ತೋಡಿಕೊಂಡರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.