ಬೆಂಗಳೂರು: ರಾಜ್ಯದಲ್ಲಿ ಭೀಕರ ಬರ ಆವರಿಸಿರುವ ಹಿನ್ನೆಲೆಯಲ್ಲಿ ಗುರುವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆಯುವ ಸರ್ವ ಪಕ್ಷಗಳ ಸಭೆ ಹೆಚ್ಚು ಮಹತ್ವ ಪಡೆದಿದೆ. ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಅಧಿಕಾರ ವಹಿಸಿಕೊಂಡ ನಂತರ ಜರುಗುತ್ತಿರುವ ಮೊದಲ ಸರ್ವಪಕ್ಷ ಸಭೆ ಇದಾಗಿದ್ದು, ಬರಪೀಡಿತ ಪ್ರದೇಶಗಳ ರೈತಾಪಿ ವರ್ಗ ಸಾಲ ಮನ್ನಾ ಸೇರಿದಂತೆ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ.
ಮುಖ್ಯಮಂತ್ರಿ ಸೇರಿದಂತೆ ಪ್ರತಿಪಕ್ಷಗಳ ಮುಖಂಡರಾದ ಸಿದ್ದರಾಮಯ್ಯ, ಎಚ್.ಡಿ.ರೇವಣ್ಣ, ಕಾಂಗ್ರೆಸ್ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬರ ಅಧ್ಯಯನ ಸಲುವಾಗಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ, ಖುದ್ದು ಪರಿಶೀಲಿಸಿದ್ದಾರೆ.
ಬರದ ಭೀಕರ ಸ್ಥಿತಿ ಇವರೆಲ್ಲರ ಅರಿವಿಗೆ ಬಂದಿದೆ. ಈ ಕಾರಣಕ್ಕೇ ಪ್ರವಾಸ ಸಂದರ್ಭದಲ್ಲಿ ಮುಖ್ಯಮಂತ್ರಿ ಸದಾನಂದಗೌಡರು ರೈತರ ಸಾಲ ಮನ್ನಾ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು. ಸರ್ವಪಕ್ಷ ಸಭೆಯಲ್ಲಿ ಈ ಕುರಿತು ಖಚಿತ ತೀರ್ಮಾನ ಹೊರಬರಬಹುದೇ ಎಂಬ ನಿರೀಕ್ಷೆಯಲ್ಲಿ ರೈತಾಪಿ ವರ್ಗ ಇದೆ.
ರಜೆ ನಿರ್ಬಂಧಕ್ಕೆ ಚಿಂತನೆ |
ಬೆಂಗಳೂರು: ರಾಜ್ಯದ ಬಹುಭಾಗಗಳಲ್ಲಿ ಭೀಕರ ಬರ ಇರುವ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು ದೀರ್ಘ ರಜೆ ತೆಗೆದುಕೊಳ್ಳುವುದನ್ನು ನಿರ್ಬಂಧಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ವೈದ್ಯಕೀಯ ಕಾರಣಗಳ ಹೊರತಾಗಿ ದೀರ್ಘ ರಜೆ ತೆಗೆದುಕೊಳ್ಳದಂತೆ ಅಧಿಕಾರಿಗಳು ಮತ್ತು ನೌಕರರಿಗೆ ಸೂಚನೆ ನೀಡಲಾಗಿದೆ. ಬರ ಪರಿಹಾರ ಕಾಮಗಾರಿಗಳಲ್ಲಿ ತೊಡಗಿಸಿಕೊಳ್ಳುವಂತೆಯೂ ನಿರ್ದೇಶನ ನೀಡಲಾಗಿದೆ. |
ಸರ್ವ ಪಕ್ಷಗಳ ಸಭೆಗೆ ಹಾಜರಾಗುವುದಾಗಿ ಪ್ರಮುಖ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ತಿಳಿಸಿವೆ. ಬರ ನಿರ್ವಹಣೆ ಕುರಿತ ಚರ್ಚೆ ಜತೆಗೆ ದಾಳಿಂಬೆ, ಅರಿಶಿಣ, ಶುಂಠಿಗೆ ಬೆಂಬಲ ಬೆಲೆ, ಕಾವೇರಿ ನದಿ ನೀರು ವಿವಾದ, ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ವಿಚಾರ ಹಾಗೂ ರೇಷ್ಮೆ ಆಮದು ಮೇಲಿನ ಸುಂಕ ಹೆಚ್ಚಿಸುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.
ಚರ್ಚೆ ನಂತರ ಇದೇ 21 ಅಥವಾ 23ರಂದು ದೆಹಲಿಗೆ ಸರ್ವ ಪಕ್ಷ ನಿಯೋಗ ಕರೆದೊಯ್ಯುವ ಬಗ್ಗೆಯೂ
ಹೆಸ್ಕಾಂ ಎಂಜಿನಿಯರ್ ಅಮಾನತು |
ಗದಗ: ಕರ್ತವ್ಯಲೋಪದ ಆರೋಪದ ಮೇಲೆ ಹೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್ ರಾಮಸ್ವಾಮಿ ಎಂಬುವವರನ್ನು ಅಮಾನತುಗೊಳಿಸಲು ಆದೇಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದರು. |
ಸಭೆಯಲ್ಲಿ ನಿರ್ಧಾರವಾಗಲಿದೆ. ರಾಜ್ಯದಲ್ಲಿ ಮಳೆ ಅಭಾವದಿಂದ ಸುಮಾರು 22.56 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾಳಾಗಿದೆ. ಇದರಿಂದ ಸುಮಾರು 4,245 ಕೋಟಿ ರೂಪಾಯಿ ನಷ್ಟ ಆಗಿದೆ. ಇದಕ್ಕೆ ಕೇಂದ್ರದಿಂದ ಹೆಚ್ಚಿನ ನೆರವು ಕೋರುವ ಬಗ್ಗೆಯೂ ಚರ್ಚಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕಾರ್ಯದರ್ಶಿಗಳ ಸಭೆ: ಸರ್ವ ಪಕ್ಷ ಸಭೆ ಹಿನ್ನೆಲೆಯಲ್ಲಿ ಗದಗ ಪ್ರವಾಸ ಮುಗಿಸಿಕೊಂಡು ಸಂಜೆ ನಗರಕ್ಕೆ ಬಂದ ಸದಾನಂದ ಗೌಡ ಅವರು ಗೃಹ ಕಚೇರಿ `ಕೃಷ್ಣಾ~ದಲ್ಲಿ ಎಲ್ಲ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳ ಸಭೆ ನಡೆಸಿದರು.
ಈ ಸಭೆಯಲ್ಲಿ ಸರ್ವಪಕ್ಷ ಸಭೆಯಲ್ಲಿ ಚರ್ಚಿಸುವ ವಿಷಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಾಲ ಮನ್ನಾ ಮಾಡುವುದರಿಂದ ಸರ್ಕಾರದ ಹಣಕಾಸು ಸ್ಥಿತಿ ಮೇಲಾಗುವ ಪರಿಣಾಮಗಳ ಬಗ್ಗೆಯೂ ಅಧಿಕಾರಿಗಳ ಜತೆ ಚರ್ಚೆ ನಡೆಸಿದರು ಎಂದು ಗೊತ್ತಾಗಿದೆ.
ಬರ ಪೀಡಿತ 123 ತಾಲ್ಲೂಕುಗಳಲ್ಲಿ 2011ರ ಏಪ್ರಿಲ್ 1ರಿಂದ 2012ರ ಮಾರ್ಚ್ 31ರವರೆಗೆ ಒಟ್ಟು 12.73 ಲಕ್ಷ ರೈತರಿಗೆ ಸಾಲ ನೀಡಲಾಗಿದೆ. ಸಾಲದ ಮೊತ್ತವೇ 4,273 ಕೋಟಿ ರೂಪಾಯಿ. ಇದನ್ನು ಮನ್ನಾ ಮಾಡುವುದಾದರು ಹೇಗೆ ಎಂದು ಚರ್ಚಿಸಲಾಗಿದೆ. ಕೆಲವರು ಅತಿ ಸಣ್ಣ ರೈತರ ಅಲ್ಪಾವಧಿ ಕೃಷಿ ಸಾಲದಲ್ಲಿ ಐದರಿಂದ ಹತ್ತು ಸಾವಿರ ರೂಪಾಯಿವರೆಗೆ ಮನ್ನಾ ಮಾಡುವ ಬಗ್ಗೆಯೂ ಸಲಹೆ ನೀಡಿದರು ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.