ADVERTISEMENT

ಹಲವೆಡೆ ಮಳೆ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2012, 19:30 IST
Last Updated 2 ಅಕ್ಟೋಬರ್ 2012, 19:30 IST

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮುಂಗಾರು ದುರ್ಬಲಗೊಂಡಿದೆ. ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ.

ಔರಾದ್ 10 ಸೆಂ. ಮೀ., ಡಬ್ಕಾ 8, ಸಂತಾಪುರ 7, ವಿರಾಜಪೇಟೆ, ಬಾಳೆಹೊನ್ನೂರು 5, ಮಂಕಿ, ಚಿತ್ತಾಪುರ 4, ಕೊಲ್ಲೂರು, ಭಟ್ಕಳ, ಕುಮಟಾ, ಶಿರಾಲಿ, ಚಿಕ್ಕೋಡಿ, ಭಾಗಮಂಡಲ, ಕೊಟ್ಟಿಗೆಹಾರ 3, ಬಂಟ್ವಾಳ, ಹೊನ್ನಾವರ, ಲೋಕಾಪುರ, ಮಹಾಲಿಂಗಪುರ, ಜಮಖಂಡಿ, ಸೇಡಂ, ಮೂಡಿಗೆರೆ 2, ಮಂಗಳೂರು, ಕೋಟಾ, ಕುಂದಾಪುರ, ಸಿದ್ದಾಪುರ, ಅಂಕೋಲಾ, ನಿಪ್ಪಾಣಿ, ಸಂಕೇಶ್ವರ, ಗೋಕಾಕ, ರಾಮದುರ್ಗ, ಲಿಂಗನಮಕ್ಕಿ, ತಾಳಗುಪ್ಪದಲ್ಲಿ ತಲಾ 1 ಸೆಂ.ಮೀ. ಮಳೆಯಾಗಿದೆ.

ಕೊಪ್ಪಳದಲ್ಲಿ ಗರಿಷ್ಠ ಉಷ್ಣಾಂಶ 31.5 ಡಿಗ್ರಿ ಸೆಲ್ಸಿಯಸ್ ಮತ್ತು ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 17.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳ ಕಾಲ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.