ADVERTISEMENT

ಹವಾಮಾನ ವರದಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2011, 17:40 IST
Last Updated 21 ಫೆಬ್ರುವರಿ 2011, 17:40 IST


ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆಯು ಮುಂದುವರಿದಿದೆ. ಬೆಳಗಾವಿಯಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದ್ದು ಉಳಿದಂತೆ ರಾಜ್ಯದೆಲ್ಲೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.