ರಾಜ್ಯದ ಹಲವೆಡೆ ಮಳೆ
ಬೆಂಗಳೂರು: ಸೋಮವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ಕರಾವಳಿ ಮತ್ತು ರಾಜ್ಯದ ಉತ್ತರ ಒಳನಾಡಿನಲ್ಲಿ ಈಶಾನ್ಯ ಮಾರುತ ದುರ್ಬಲವಾಗಿದ್ದು, ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗಿದೆ.
ಕೊಡಗು ಜಿಲ್ಲೆಯ ಹಾರಂಗಿಯಲ್ಲಿ ಅತಿ ಹೆಚ್ಚು 13 ಸೆಂ.ಮೀ ಮಳೆಯಾಗಿದೆ. ಭಾಗಮಂಡಲ. ಮಡಿಕೇರಿ 7, ಮಾದಾಪುರ 5, ಮೂರ್ನಾಡಿನಲ್ಲಿ 3, ಸೆಂ.ಮೀ ಮಳೆಯಾಗಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 17.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಕೆಲವು ಪ್ರದೇಶಗಳು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.