ಕಾರವಾರ: ಹಾಲು ತರಲು ಮನೆಯೊಂದಕ್ಕೆ ಹೋಗಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹೊನ್ನಾವರ ತಾಲ್ಲೂಕಿನಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.
21 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದೆ. ಈ ಸಂಬಂಧ ಹೊನ್ನಾವರ ಠಾಣಾ ಪೊಲೀಸರು ಆರೋಪಿ ಸುಬ್ರಹ್ಮಣ್ಯ ರೊಬೆಲ್ ಶೆಟ್ಟಿ (29)ಯನ್ನು ಬಂಧಿಸಿದ್ದಾರೆ.
ಎರಡು ದಿನಗಳ ಹಿಂದೆ ಘಟನೆ ನಡೆದಿದೆ. ಆರೋಪಿಯ ಮನೆಗೆ ಹಾಲು ತರಲು ಬಂದಿದ್ದಾಗ ಅತ್ಯಾಚಾರ ಎಸಗಿರುವ ಕುರಿತು ಆರೋಪಿಸಲಾಗಿದೆ.
ಈ ಸಂಬಂಧ ಹೊನ್ನಾವರ ಠಾಣೆಗೆ ಯುವತಿಯ ತಾಯಿ ದೂರು ನೀಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.