ADVERTISEMENT

ಹಾಸನ: ಉಸ್ತುವಾರಿ ಸಚಿವ ಎ.ಮಂಜು ವಿರುದ್ಧ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2018, 5:44 IST
Last Updated 5 ಏಪ್ರಿಲ್ 2018, 5:44 IST
ಸಚಿವ ಎ.ಮಂಜು (ಸಂಗ್ರಹ ಚಿತ್ರ)
ಸಚಿವ ಎ.ಮಂಜು (ಸಂಗ್ರಹ ಚಿತ್ರ)   

ಹಾಸನ: ಸರ್ಕಾರಿ ಕಟ್ಟಡ ದುರ್ಬಳಕೆ ಮಾಡಿ ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿದ ಆರೋಪದಲ್ಲಿ ಉಸ್ತುವಾರಿ ಸಚಿವ ಎ.ಮಂಜು ವಿರುದ್ಧ ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ ಮೇರೆಗೆ ಚುನಾವಣಾ ಅಧಿಕಾರಿ ರಾಜೇಶ್‌ ದೂರು ನೀಡಿದ್ದರು. ಸಚಿವರ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 188ರ ಅನ್ವಯ ಎಫ್‌ಐಆರ್‌ ದಾಖಲಿಸಲಾಗಿದೆ.

ಚುನಾವಣಾ ನೀತಿಸಂಹಿತೆ ಜಾರಿಯಾದ ಬಳಿಕವೂ ಸರ್ಕಾರಿ ಕಟ್ಟಡ ಬಳಸಿದ್ದ ಆರೋಪ ಸಚಿವರ ಮೇಲಿದೆ. ಸಚಿವರ ಕಚೇರಿ ಇದ್ದ ಕಟ್ಟಡದಲ್ಲಿ ಸಿಬ್ಬಂದಿ ಅನಧಿಕೃತವಾಗಿ ಕಾರ್ಯನಿರ್ವಹಿಸಿದ್ದಾರೆ. ಹೊರಗಿನಿಂದ ಕಚೇರಿಯ ಬಾಗಿಲು ಬಂದ್ ಮಾಡಿ‌ ಒಳಗೆ ಕೆಲಸ ಮಾಡುತ್ತಿದ್ದರು ಎಂಬ ಆರೋಪವಿದೆ. ಈ ಬಗ್ಗೆ ಸ್ಪಷ್ಟನೆ ಕೇಳಿ ಜಿಲ್ಲಾ ಚುನಾವಣಾ ಅಧಿಕಾರಿಯೂ ಆಗಿರುವ ರೋಹಿಣಿ ಸಿಂಧೂರಿ ನೋಟೀಸ್ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.