ADVERTISEMENT

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಆದೇಶ ಎತ್ತಿ ಹಿಡಿದ ಸಿಎಟಿ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2018, 6:25 IST
Last Updated 17 ಏಪ್ರಿಲ್ 2018, 6:25 IST
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ   


ಬೆಂಗಳೂರು: ವರ್ಗಾವಣೆ ಆದೇಶ ಪ್ರಶ್ನಿಸಿ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಆಡಳಿತ ನ್ಯಾಯಮಂಡಳಿ(ಸಿಎಟಿ) ಮಂಗಳವಾರ ವಜಾ ಮಾಡಿದೆ. 

ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಎ.ಎಸ್‌.ಪೊನ್ನಣ್ಣ, ‘ಸರ್ಕಾರ ಕಾನೂನು ಬದ್ಧವಾಗಿಯೇ ವರ್ಗಾವಣೆ ಮಾಡಿದೆ’ ಎಂದರು.

ಇದನ್ನು ಸಿಎಟಿ ಮಾನ್ಯ ಮಾಡಿ ವರ್ಗಾವಣೆ ಆದೇಶ ಎತ್ತಿ ಹಿಡಿದಿದೆ.

ADVERTISEMENT

‘ಸರ್ಕಾರ ಉದ್ದೇಶ ಪೂರ್ವಕವಾಗಿ ರೋಹಿಣಿ ಅವರನ್ನು ವರ್ಗಾವಣೆ ಮಾಡಿದೆ’ ಎಂದು ಹಿರಿಯ ವಕೀಲ ಸುಬ್ರಹ್ಮಣ್ಯ ಜೋಯಿಸ್ ವಾದ ಮಂಡಿಸಿದರು. ಆದರೆ ಇದನ್ನು ನ್ಯಾಯಮಂಡಳಿ ಒಪ್ಪಲಿಲ್ಲ.

ಹೈಕೋರ್ಟ್‌ಗೆ ಅರ್ಜಿ: ಆದೇಶ ಪ್ರತಿ ಕೈಸೇರಿದ ಕೂಡಲೇ ಹೈಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಲಾಗುವುದು. ಇದೇ 19ರಂದು ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದು ಸುಬ್ರಹ್ಮಣ್ಯ ಜೋಯಿಸ್ 'ಪ್ರಜಾವಾಣಿ'ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.