
ಪ್ರಜಾವಾಣಿ ವಾರ್ತೆಚಿತ್ರದುರ್ಗ: ಹಾಸ್ಯ ಸಾಹಿತಿ, ಅರಾಸೇ ಕಾವ್ಯನಾಮದಿಂದ ಪರಿಚಿತರಾಗಿದ್ದ ಎ.ಆರ್.ಸೇತೂರಾಮರಾವ್ (84) ಅವರು ಅನಾರೋಗ್ಯದಿಂದ ಗುರುವಾರ ರಾತ್ರಿ ಬೆಂಗಳೂರಿನ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಒಬ್ಬ ಪುತ್ರಿ, ಒಬ್ಬ ಪುತ್ರ ಇದ್ದಾರೆ.
ಮೃತರ ಅಂತ್ಯಕ್ರಿಯೆ ಶುಕ್ರವಾರ ಬೆಂಗಳೂರಿನಲ್ಲಿ ನಡೆಯಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಭರಮಸಾಗರದವರಾದ ಅರಾಸೇ ಅವರು ಬೆಂಗಳೂರಿನ ತ್ಯಾಗರಾಜನಗರದಲ್ಲಿ ಮಕ್ಕಳೊಂದಿಗೆ ನೆಲೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.