ADVERTISEMENT

ಹಿಂದೂಗಳ ಹತ್ಯೆ ಪ್ರಕರಣ ಸಿಬಿಐಗೆ ವಹಿಸುವಂತೆ ಬಿಜೆಪಿ ನಾಯಕರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2017, 9:37 IST
Last Updated 12 ಡಿಸೆಂಬರ್ 2017, 9:37 IST
ಹಿಂದೂಗಳ ಹತ್ಯೆ ಪ್ರಕರಣ ಸಿಬಿಐಗೆ ವಹಿಸುವಂತೆ ಬಿಜೆಪಿ ನಾಯಕರ ಒತ್ತಾಯ
ಹಿಂದೂಗಳ ಹತ್ಯೆ ಪ್ರಕರಣ ಸಿಬಿಐಗೆ ವಹಿಸುವಂತೆ ಬಿಜೆಪಿ ನಾಯಕರ ಒತ್ತಾಯ   

ಬೆಂಗಳೂರು: ರಾಜ್ಯದಲ್ಲಿ 20 ಕ್ಕೂ ಹೆಚ್ಚು ಹಿಂದೂಗಳ ಹತ್ಯೆಯಾಗಿರುವುದನ್ನು ಖಂಡಿಸಿ ಮತ್ತು ಈ ಎಲ್ಲ ಪ್ರಕರಣಗಳನ್ನು ಸಿಬಿಐ ಅಥವಾ ಎನ್ಐಎ ವಹಿಸುವಂತೆ ಆಗ್ರಹಿಸಿ ಬಿಜೆಪಿ ನಾಯಕರು ವಿಧಾನಸೌಧ ಮುಂಭಾಗದ ಅಂಬೇಡ್ಕರ್ ಪ್ರತಿಮೆಯಿಂದ ರಾಜಭವನದ ವರೆಗೆ ಮಂಗಳವಾರ ಕಾಲ್ನಡಿಗೆಯಲ್ಲಿ ಸಾಗಿದರು.

ಹೊನ್ನಾವರದಲ್ಲಿ ಪರೇಶ್ ಮೇಸ್ತಾ ಹತ್ಯೆ ಪ್ರಕರಣದಲ್ಲಿ ಪೊಲೀಸರಿಂದ ಸಂಪೂರ್ಣ ಮಾನವಹಕ್ಕು ಉಲ್ಲಂಘನೆಯಾಗಿದೆ ಎಂದು ಶೋಭಾ ಕರಂದ್ಲಾಜೆ ಆರೋಪಿಸಿದರು.

ಕರಾವಳಿ ಭಾಗದಲ್ಲಿ ಐಎಸ್ಐಎಸ್‌ಗೆ ನೇಮಕಾತಿ ನಡೆಯುತ್ತಿದೆ ಎನ್ನುವ ಮಾಹಿತಿಯೂ ಇದೆ. ಮೇಸ್ತಾ ಹತ್ಯೆ ಆಕಸ್ಮಿಕ ಸಾವು ಎಂದು ಹೇಳಲಾಗುತ್ತಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ವರದಿಯನ್ನೂ ತಿರುಚುವ ಸಾಧ್ಯತೆಗಳಿವೆ ಎಂದರು.

ADVERTISEMENT

ಈ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮುಚ್ಚಿಹಾಕಲು ಹೊರಟಿದ್ದಾರೆ. ಮುಸಲ್ಮಾನ ಗೂಂಡಾಗಳಿಗೆ ಪೊಲೀಸರಿಂದಲೇ ಕುಮ್ಮಕ್ಕು ದೊರೆತಿದೆ. ರಾಷ್ಟ್ರ ಭಕ್ತರ ಹೆಣಗಳ ಮೇಲೆ ಸಿಎಂ ರಾಜಕಾರಣ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.