ಬೆಂಗಳೂರು: ಹೈದರಾಬಾದ್ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಟ್ಟಿರುವ ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸುವ ಸಂಬಂಧ ಅಗತ್ಯ ನಿಯಮಾವಳಿ ರೂಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ.ಪಾಟೀಲ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಉಪ ಸಮಿತಿ ರಚಿಸಲಾಗಿದೆ.
ಸಚಿವರಾದ ಟಿ.ಬಿ.ಜಯಚಂದ್ರ, ಖಮರುಲ್ ಇಸ್ಲಾಂ, ಬಾಬುರಾವ್ ಚಿಂಚನಸೂರು, ಡಾ.ಶರಣ ಪ್ರಕಾಶ್ ಪಾಟೀಲ, ಉಮಾಶ್ರೀ, ಪರಮೇಶ್ವರ್ ನಾಯ್ಕ ಅವರು ಸಮಿತಿಯ ಸದಸ್ಯರಾಗಿರುತ್ತಾರೆ ಎಂದು ಸೋಮವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.