ADVERTISEMENT

ಹೈ-ಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ: 7ರಂದು ರೈಲು ತಡೆ

​ಪ್ರಜಾವಾಣಿ ವಾರ್ತೆ
Published 4 ಜನವರಿ 2012, 19:30 IST
Last Updated 4 ಜನವರಿ 2012, 19:30 IST

ಬೆಂಗಳೂರು: ಸಂವಿಧಾನದ 371ನೇ ವಿಧಿಯಡಿ ಹೈದರಾಬಾದ್-ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಒತ್ತಾಯಿಸಿ `ಕನ್ನಡ ಒಕ್ಕೂಟ~ ಇದೇ 7ರಂದು ರಾಜ್ಯದಾದ್ಯಂತ ರೈಲು ತಡೆ ನಡೆಸಲಿದೆ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಹೇಳಿದರು.

ಶನಿವಾರ ಬೆಳಿಗ್ಗೆ 8 ಗಂಟೆಗೆ ಆರಂಭವಾಗುವ ರೈಲು ತಡೆ ಚಳವಳಿ ಮಾರನೆಯ ದಿನ ಬೆಳಿಗ್ಗೆ 8 ಗಂಟೆಯವರೆಗೆ ಮುಂದುವರೆಯಲಿದೆ. ಇದಕ್ಕೆ ವಿವಿಧ ಕನ್ನಡಪರ ಸಂಘಟನೆಗಳು ಬೆಂಬಲ ಸೂಚಿಸಿವೆ ಎಂದು ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಚಳವಳಿಯನ್ನು ಮುಂದಿನ ದಿನಗಳಲ್ಲಿ ತೀವ್ರಗೊಳಿಸಲಾಗುವುದು. ಅಗತ್ಯ ಕಂಡುಬಂದರೆ ಫೆಬ್ರುವರಿ ಕೊನೆ ವಾರದಲ್ಲಿ ರಾಜ್ಯ ಬಂದ್‌ಗೆ ಕರೆ ನೀಡಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT