ಮೈಸೂರು: `ತಮಿಳುನಾಡು ಸರ್ಕಾರ ಹೊಗೇನಕಲ್ ಗಡಿ ಭಾಗದಲ್ಲಿ ಕುಡಿಯುವ ನೀರು ಅಣೆಕಟ್ಟೆ ನಿರ್ಮಾಣ ಮಾಡುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಲು ದೆಹಲಿಗೆ ಸರ್ವಪಕ್ಷಗಳ ನಿಯೋಗ ತೆರಳಿದಾಗ ಆಗ್ರಹಿಸಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದರು.
ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಶನಿವಾರ ಬೆಳಿಗ್ಗೆ ಆಗಮಿಸಿದ ಅವರು ಲಲಿತಮಹಲ್ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
`ರಾಜ್ಯದ ನೆಲ-ಜಲಕ್ಕೆ ಧಕ್ಕೆ ಆದಾಗ ಸರ್ಕಾರ ರಾಜಿಗೆ ಮುಂದಾಗುವುದಿಲ್ಲ. ಕುಡಿಯುವ ನೀರು ಅಣೆಕಟ್ಟೆ ನಿರ್ಮಾಣಕ್ಕೆ ರಾಜ್ಯದಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಹಾಗಾಗಿ ಕೇಂದ್ರ ಸರ್ಕಾರ ಶೀಘ್ರವೇ ಮಧ್ಯಪ್ರವೇಶಿಸಿ ವಿವಾದವನ್ನು ಬಗೆಹರಿಸಬೇಕು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.