ADVERTISEMENT

ಹೊಸ್ಕೆರೆ: ನಾಟಿ ಕೋಳಿಗಳಿಗೆ ಕೊಕ್ಕರೆ ರೋಗ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2018, 19:30 IST
Last Updated 1 ಏಪ್ರಿಲ್ 2018, 19:30 IST
ಮೂಡಿಗೆರೆ ತಾಲ್ಲೂಕಿನ ಹೊಸ್ಕೆರೆ ಗ್ರಾಮದಲ್ಲಿ ನಾಟಿ ಕೋಳಿಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಪಶು ಇಲಾಖೆ ವತಿಯಿಂದ ಕೋಳಿಗಳಿಗೆ ಲಸಿಕೆ ಹಾಕಲಾಯಿತು.
ಮೂಡಿಗೆರೆ ತಾಲ್ಲೂಕಿನ ಹೊಸ್ಕೆರೆ ಗ್ರಾಮದಲ್ಲಿ ನಾಟಿ ಕೋಳಿಗಳು ಸಾವನ್ನಪ್ಪುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ಪಶು ಇಲಾಖೆ ವತಿಯಿಂದ ಕೋಳಿಗಳಿಗೆ ಲಸಿಕೆ ಹಾಕಲಾಯಿತು.   

ಮೂಡಿಗೆರೆ: ತಾಲ್ಲೂಕಿನ ಹೊಸ್ಕೆರೆ ಹಾಗೂ ಸುತ್ತಮುತ್ತಲ ಗ್ರಾಮದಲ್ಲಿ ನಾಟಿಕೋಳಿಗಳು ಸಾವನ್ನಪ್ಪುತ್ತಿರುವುದಕ್ಕೆ ಕೊಕ್ಕರೆ ರೋಗ ಕಾರಣ ಎಂದು ಪಶು ಇಲಾಖೆ ಸಹಾಯಕ ನಿರ್ದೇಶಕ ಡಾ.ಜಗದೀಶ್‌ ತಿಳಿಸಿದ್ದಾರೆ.

‘ತಾಲ್ಲೂಕಿನಲ್ಲಿ ಎಲ್ಲಿಯೂ ಹಕ್ಕಿಜ್ವರ ಕಾಣಿಸಿಕೊಂಡಿಲ್ಲ. ಕೊಕ್ಕರೆ ರೋಗಕ್ಕೆ ಲಸಿಕೆ ಲಭ್ಯವಿದೆ. ಎಲ್ಲ ಗ್ರಾಮ ಸಭೆಗಳಲ್ಲೂ ನಾಟಿ ಕೋಳಿಗಳಿಗೆ ಲಸಿಕೆ ಹಾಕಿಸುವಂತೆ ರೈತರಿಗೆ ಇಲಾಖೆಯಿಂದ ಮಾಹಿತಿ ನೀಡಲಾಗಿತ್ತು. ಆದರೆ ಲಸಿಕೆ ಹಾಕಿಸಿಕೊಳ್ಳದೆ ಇರುವುದರಿಂದ ರೋಗ ಕಾಣಿಸಿಕೊಂಡು ಕೋಳಿಗಳು ಸಾವನ್ನಪ್ಪುತ್ತಿವೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT