ADVERTISEMENT

ಹೊಸ ಸಹಕಾರ ನೀತಿ: ಸಚಿವ ಬಂಡೆಪ್ಪ ಕಾಶೆಂಪುರ

​ಪ್ರಜಾವಾಣಿ ವಾರ್ತೆ
Published 15 ಜೂನ್ 2018, 20:30 IST
Last Updated 15 ಜೂನ್ 2018, 20:30 IST
ಬಂಡೆಪ್ಪ ಕಾಶೆಂಪುರ
ಬಂಡೆಪ್ಪ ಕಾಶೆಂಪುರ   

ಬೀದರ್: ‘ಸಹಕಾರ ಕ್ಷೇತ್ರವನ್ನು ಇನ್ನಷ್ಟು ಬಲಪಡಿಸುವ ದಿಸೆಯಲ್ಲಿ ಹೊಸ ಸಹಕಾರ ನೀತಿಯನ್ನು ರೂಪಿಸಲಾಗುವುದು’ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ ತಿಳಿಸಿದರು.

‘ಅನೇಕ ಕಾರಣಗಳಿಂದಾಗಿ ಸಹಕಾರ ಕ್ಷೇತ್ರದ ಸಕ್ಕರೆ ಕಾರ್ಖಾನೆಗಳು ಆರ್ಥಿಕ ಮುಗ್ಗಟ್ಟು ಎದುರಿಸುತ್ತಿವೆ. ಸಕ್ಕರೆ ಕಾರ್ಖಾನೆಗಳು ಲಾಭದಲ್ಲಿ ನಡೆಯುವಂತಾಗಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಹೊಸ ನೀತಿ ರೂಪಿಸಲಾಗುವುದು’ ಎಂದು ನಗರದ ತಮ್ಮ ನಿವಾಸದಲ್ಲಿ ಶುಕ್ರವಾರ ಮಾಧ್ಯಮ ಗೋಷ್ಠಿಯಲ್ಲಿ ಹೇಳಿದರು.

‘ಮುಖ್ಯಮಂತ್ರಿ ಕುಮಾರಸ್ವಾಮಿ ನನ್ನ ಮೇಲೆ ವಿಶ್ವಾಸ ಇಟ್ಟು ಸಹಕಾರ ಖಾತೆ ಕೊಟ್ಟಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುತ್ತೇನೆ. ಇನ್ನುಳಿದ ವಿಷಯಗಳ ಬಗೆಗೆ ನಾನು ಮಾತನಾಡಲಾರೆ’ ಎಂದು ತಿಳಿಸಿದರು.

ADVERTISEMENT

ಸಹಕಾರ ಖಾತೆಗೆ ಜಿ.ಟಿ.ದೇವೆಗೌಡರು ಪಟ್ಟು ಹಿಡಿದಿರುವ ಬಗೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.