ಬೆಂಗಳೂರು: ಕೇಂದ್ರೀಯ ಹೋಮಿಯೋಪಥಿ ಪರಿಷತ್‌ನ ಸದಸ್ಯರನ್ನಾಗಿ ನಗರದ ಸರ್ಕಾರಿ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ.ಎ.ಎಲ್. ಪಾಟೀಲ್ ಮತ್ತು ಹೋಮಿಯೋಪಥಿ ವೈದ್ಯ ಡಾ.ಬಿ.ಟಿ. ರುದ್ರೇಶ್ ಅವರನ್ನು ನೇಮಕ ಮಾಡಲಾಗಿದೆ.
ಐದು ವರ್ಷಗಳ ಅವಧಿಗೆ ಅವರು ಸದಸ್ಯರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಅವರು ರಾಜ್ಯದ ಎಲ್ಲಾ ಹೋಮಿಯೋಪಥಿ ಕಾಲೇಜು ಮತ್ತು ಆಸ್ಪತ್ರೆಗಳ ಮೂಲ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿ, ಈ ಚಿಕಿತ್ಸಾ ಪದ್ಧತಿಯನ್ನು ಅಭಿವೃದ್ಧಿಗೊಳಿಸಲು ಶ್ರಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.