ADVERTISEMENT

‘ಇಷ್ಟು ಬೇಗ ಮೌಲ್ಯಮಾಪನ ಸರಿಯಲ್ಲ’

ಎಐಸಿಸಿ ಸೂಚನೆ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2013, 19:59 IST
Last Updated 16 ಸೆಪ್ಟೆಂಬರ್ 2013, 19:59 IST

ಬೆಂಗಳೂರು: ಸರ್ಕಾರ ಅಸ್ತಿತ್ವಕ್ಕೆ ಬಂದ ನಾಲ್ಕೇ ತಿಂಗಳ ಅವಧಿಯಲ್ಲಿ ಸಚಿವರ ಮೌಲ್ಯಮಾಪನ ನಡೆಸಿದರೆ ನಿಖರ ಫಲಿತಾಂಶ ದೊರೆಯುವ ಸಾಧ್ಯತೆ ಇರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿಯವರ ನಿವಾಸಕ್ಕೆ ಸೋಮವಾರ ರಾತ್ರಿ ಭೇಟಿನೀಡಿದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್‌ ಅವರು ಕೆಲಕಾಲ ಮುಖ್ಯಮಂತ್ರಿ­ಯವರ ಜೊತೆ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿ­ಕ್ರಿಯೆ ನೀಡಿದ ಮುಖ್ಯಮಂತ್ರಿ, ‘ಮೌಲ್ಯ­ಮಾಪನದ ದೃಷ್ಟಿಯಿಂದ ನಾಲ್ಕು ತಿಂಗಳ ಅವಧಿ ತೀರಾ ಕಡಿಮೆ ಎನಿಸುತ್ತದೆ’ ಎಂದರು.

ಬಳಿಕ ಪತ್ರಕರ್ತರ ಜೊತೆ ಮಾತ­ನಾಡಿದ  ಪರಮೇಶ್ವರ್‌, ‘ಸಚಿವರ ಮೌಲ್ಯಮಾಪನ ನಡೆಸುವುದು ಎಐಸಿಸಿ ವರಿಷ್ಠರ ತೀರ್ಮಾನ. ಅದನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದಿದ್ದೇನೆ. ಪಕ್ಷದ ವರಿಷ್ಠರು ನೀಡುವ ಸೂಚನೆಗಳನ್ನು ಮುಖ್ಯಮಂತ್ರಿ ಮತ್ತು ಸಚಿವರಿಗೆ ತಿಳಿಸುವುದು ನನ್ನ ಕರ್ತವ್ಯ’ ಎಂದು ಪ್ರತಿಕ್ರಿಯಿಸಿದರು. ಇದೇ ವೇಳೆ ಕೇಂದ್ರ ಭೂ ಸಾರಿಗೆ ಆಸ್ಕರ್‌ ಫರ್ನಾಂಡಿಸ್‌ ಅವರು ಸಿ.ಎಂ ಸಿದ್ದರಾಮಯ್ಯ ಅವರನ್ನು ಭೇಟಿಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.