ಬಳ್ಳಾರಿ: ಸೋದರ ರಾಘವೇಂದ್ರ ರಾಜಕುಮಾರ್ ಅವರ ಆರೋಗ್ಯ ಸ್ಥಿರವಾಗಿದ್ದು, ಯಾವುದೇ ತೊಂದರೆ ಇಲ್ಲ ಎಂದು ನಟ ಪುನೀತ್ ರಾಜಕುಮಾರ್ ತಿಳಿಸಿದರು.
ನಗರದ ಚಿತ್ರಮಂದಿರ ಒಂದರಲ್ಲಿ ಶನಿವಾರ ಶಿವರಾಜ್‌ಕುಮಾರ್ ಅಭಿನಯದ ‘ಭಜರಂಗಿ’ ಚಿತ್ರ ವೀಕ್ಷಣೆಗೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿವಿಷಯ ತಿಳಿಸಿದರು.
ರಾಘವೇಂದ್ರ ರಾಜಕುಮಾರ್ ಉನ್ನತ ವೈದ್ಯಕೀಯ ಚಿಕಿತ್ಸೆಗಾಗಿ ಸಿಂಗಪುರಕ್ಕೆ ತೆರಳಲಿದ್ದಾರೆ. ಅವರ ಆರೋಗ್ಯದಲ್ಲಿ ಯಾವುದೇ ತೊಂದರೆ ಇಲ್ಲ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.