ADVERTISEMENT

‘ಪಂಪ’ ಮರಳಿಸಲು ಚಂಪಾ ತೀರ್ಮಾನ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2015, 19:51 IST
Last Updated 5 ಸೆಪ್ಟೆಂಬರ್ 2015, 19:51 IST

ಬೆಂಗಳೂರು: ‘ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆ ಖಂಡಿಸಿ ಪಂಪ ಪ್ರಶಸ್ತಿಯನ್ನು ಭಾನುವಾರ ಸರ್ಕಾರಕ್ಕೆ ಮರಳಿಸುತ್ತಿದ್ದೇನೆ’ ಎಂದು ಸಾಹಿತಿ ಪ್ರೊ. ಚಂದ್ರಶೇಖರ ಪಾಟೀಲ ತಿಳಿಸಿದರು.

ಅವರಿಗೆ 2009ನೇ ಸಾಲಿನಲ್ಲಿ ಪಂಪ ಪ್ರಶಸ್ತಿ ದೊರೆತಿತ್ತು. ‘ಪ್ರಜಾವಾಣಿ’ ಜೊತೆ ಮಾತನಾಡಿದ ಅವರು, ‘ಡಾ.ಎಂ.ಎಂ. ಕಲಬುರ್ಗಿ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿರುವುದು ಅಭಿವ್ಯಕ್ತಿ ಸ್ವಾತಂತ್ರ್ಯದ ಮೇಲಿನ ಹಲ್ಲೆ ಎಂಬುದು ನನ್ನ ಅನಿಸಿಕೆ. ಇದನ್ನು ಖಂಡಿಸಿ ಈ ತೀರ್ಮಾನಕ್ಕೆ ಬಂದಿದ್ದೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.