ಬೆಳಗಾವಿ: ‘ಇಲ್ಲಿಯ ಸುವರ್ಣ ವಿಧಾನಸೌಧದಲ್ಲಿ ನವೆಂಬರ್ ತಿಂಗಳಿನಲ್ಲಿ 10 ದಿನಗಳ ಅವಧಿಯ ಚಳಿಗಾಲದ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ’ ಎಂದು ವಿಧಾನ ಪರಿಷತ್ ಸಭಾಪತಿ ಡಿ.ಎಚ್. ಶಂಕರಮೂರ್ತಿ ಹೇಳಿದರು.
‘ನವೆಂಬರ್ 11ರಿಂದ ಅಧಿವೇಶನ ನಡೆಸುವ ಕುರಿತು ಸಲಹೆ ನೀಡಿದ್ದು, ಈ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳಲಿದೆ’ ಎಂದು ಶಂಕರಮೂರ್ತಿ ಬುಧವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
‘ಅಧಿವೇಶನ ಕುರಿತು ಈಗಾಗಲೇ ಸದನ ಕಲಾಪಗಳ ಸಮಿತಿಯು ಮುಖ್ಯಮಂತ್ರಿಗಳೊಂದಿಗೆ ಸಭೆಯನ್ನು ನಡೆಸಿದೆ. ಈ ಕುರಿತು ಅಂತಿಮವಾಗಿ ನಿರ್ಣಯ ಕೈಗೊಂಡು, ವಿಧಾನಸಭಾಧ್ಯಕ್ಷರು, ಸಭಾಪತಿ ಜತೆ ಚರ್ಚಿಸಿ ಸಚಿವ ಸಂಪುಟದಲ್ಲಿ ನಿರ್ಣಯ ಕೈಗೊಳ್ಳಲಿದೆ’ ಎಂದರು.
ಪ್ರಸಕ್ತ ವರ್ಷ ಈವರೆಗೆ 32 ದಿನಗಳ ಕಾಲ ಅಧಿವೇಶನ ನಡೆಸಲಾಗಿದೆ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.