ADVERTISEMENT

ಅಕ್ರಮವಾಗಿ ಸಾಗಿಸುತ್ತಿದ್ದ ₹1.65 ಕೋಟಿ ನಗದು ವಶ; ಇಬ್ಬರ ಬಂಧನ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2018, 8:09 IST
Last Updated 2 ನವೆಂಬರ್ 2018, 8:09 IST
   

ಉಡುಪಿ: ಇಲ್ಲಿನ ಇಂದ್ರಾಳಿ ರೈಲು ನಿಲ್ದಾಣದಲ್ಲಿ ಶುಕ್ರವಾರ ನೇತ್ರಾವತಿ ಎಕ್ಸ್ ಪ್ರೆಸ್ ರೈಲಿನಲ್ಲಿ ದಾಖಲೆ ಇಲ್ಲದೆ ಸಾಗಿಸಲಾಗುತ್ತಿದ್ದ ₹1.65 ಕೋಟಿ ನಗದನ್ನು ರೈಲ್ವೆ ರಕ್ಷಣಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ರಾಜಸ್ತಾನದ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ‌.

ಮುಂಬೈಯಿಂದ ಎರ್ನಾಕುಲಂ ಮಾರ್ಗದಲ್ಲಿ ಸಂಚರಿಸುವ ನೇತ್ರಾವತಿ ಏಕ್ಸ್‌ಪ್ರೆಸ್‌ ರೈಲಿನಲ್ಲಿಹಣ ಸಾಗಾಟ ಮಾಡಲಾಗುತ್ತಿತ್ತು. ಈ ಹಣವನ್ನು ಪಡೆಯಲು ಇಂದ್ರಾಳಿ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಕಾಯುತ್ತ ಕುಳಿತ್ತಿದ್ದ. ಈ ಬಗ್ಗೆ ಸಂಶಯಗೊಂಡ ರೈಲ್ವೆ ರಕ್ಷಣಾ ಸಿಬ್ಬಂದಿ ವಿಚಾರಣೆ ಮಾಡಿದಾಗ ಅಕ್ರಮ ಪತ್ತೆಯಾಗಿದೆ.

ADVERTISEMENT

ಐಟಿ ಅಧಿಕಾರಿಗಳು, ಉಡುಪಿ ತಹಶೀಲ್ದಾರ್ ಹಾಗೂ ಚುನಾವಣಾಧಿಕಾರಿಗಳು ಸ್ಥಳಕ್ಕೆ ಭೇಟಿದ್ದಾರೆ. ರೈಲ್ವೆ ರಕ್ಷಾಣಾ ದಳ ಠಾಣೆಯಲ್ಲಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.