ADVERTISEMENT

ತೀರ್ಥಹಳ್ಳಿ: 12 ಜನರಲ್ಲಿ ಮಂಗನ ಕಾಯಿಲೆ ರೋಗಾಣು

​ಪ್ರಜಾವಾಣಿ ವಾರ್ತೆ
Published 26 ಜನವರಿ 2020, 19:47 IST
Last Updated 26 ಜನವರಿ 2020, 19:47 IST
   

ತೀರ್ಥಹಳ್ಳಿ: ‘ಮಂಗನ ಕಾಯಿಲೆ ಎಲ್ಲೆಡೆ ಉಲ್ಬಣವಾಗುತ್ತಿದ್ದು, ತೀರ್ಥಹಳ್ಳಿ ತಾಲ್ಲೂಕೊಂದರಲ್ಲಿಯೇ 12 ಜನರಲ್ಲಿ ರೋಗದ ವೈರಾಣು ಇರುವುದು ದೃಢಪಟ್ಟಿದೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಅಶೋಕ್ ತಿಳಿಸಿದ್ದಾರೆ.

‘ಮಂಡಗದ್ದೆ ಸುತ್ತಮುತ್ತಲಿನ ಪ್ರದೇಶದ ಸಿಂದುವಾಡಿ ಗ್ರಾಮಕ್ಕೆ ಹೊಂದಿಕೊಂಡ ಹಳ್ಳಿಗಳಲ್ಲಿ 6, ಕನ್ನಂಗಿ ಭಾಗದ ಗ್ರಾಮಗಳಲ್ಲಿ 4, ಬೆಟ್ಟ ಬಸರವಾನಿ, ಕಟಗಾರುನಲ್ಲಿ ತಲಾ 1ಪ್ರಕರಣ ಪತ್ತೆಯಾಗಿವೆ. ಇವರಲ್ಲಿ 4 ಮಂದಿ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

ಸಾಗರದಲ್ಲಿ ಮತ್ತೊಬ್ಬರಿಗೆ ಸೋಂಕು: ತಾಲ್ಲೂಕಿನ ಕೋಗಾರು ಸಮೀಪದ ಕೊಂಜವಳ್ಳಿ ಗ್ರಾಮದ ಸ್ವಾಮಿ ಎಂಬ ವ್ಯಕ್ತಿಗೆ ಜ್ವರ ಕಾಣಿಸಿಕೊಂಡಿದ್ದು ಪರೀಕ್ಷೆಯ ನಂತರ ಮಂಗನ ಕಾಯಿಲೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರನ್ನು ಇಲ್ಲಿನ ಉಪವಿಭಾಗೀಯ ಸರ್ಕಾರಿ ಆಸ್ಪತ್ರೆಯ ಕೆಎಫ್‌ಡಿ ವಾರ್ಡ್‌ಗೆ ದಾಖಲಿಸಲಾಗಿದ್ದು, ನಿಗಾ ವಹಿಸಲಾಗುತ್ತಿದೆ ಎಂದು ತಾಲ್ಲೂಕು ವೈದಾಧಿಕಾರಿ ಡಾ.ರಾಜು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.